Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಲ್ಲೂಕು ಕಚೇರಿ ಆವರಣದಲ್ಲಿ ಶೌಚಾಲಯ ಅವ್ಯವಸ್ಥೆ : ಕರುನಾಡ ವಿಜಯಸೇನೆ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.11: ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಶೌಚಾಲಯ ಇನ್ನು ಬಳಕೆಗೆ ಬಾರದಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಸೋಮವಾರ ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಕಚೇರಿಗೆ ದಿನನಿತ್ಯವೂ ಕೆಲಸದ ನಿಮಿತ್ತ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಾರೆ. ಪಕ್ಕದಲ್ಲಿಯೇ ಸಬ್‍ರಿಜಿಸ್ಟರ್ ಕಚೇರಿಯೂ ಇದೆ. ವಿಶೇಷವಾಗಿ ಇಲ್ಲಿಗೆ ಬರುವ ಮಹಿಳೆಯರು ಜಲಭಾದೆ ತೀರಿಸಿಕೊಳ್ಳಲು ಎಲ್ಲಿಗೆ ಹೋಗಬೇಕು. ಅಂದಾಜು ಹದಿನಾರು ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶೌಚಾಲಯವನ್ನು ನೀರಿಲ್ಲದ ಕಾರಣಕ್ಕೆ ಬಂದ್ ಮಾಡಲಾಗಿದೆ. ವಿಪರ್ಯಾಸವೆಂದರೆ ಶೌಚಾಲಯದಲ್ಲಿ ಹಳೆ ಕಡತಗಳ ರಾಶಿ ಹಾಕಲಾಗಿದೆ.

ಇದು ಯಾವ ನ್ಯಾಯ? ಎಂದು ತಹಶೀಲ್ದಾರ್‍ನನ್ನು ಪ್ರಶ್ನಿಸಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಇನ್ನೆರಡು ಮೂರು ದಿನಗಳಲ್ಲಿ ಶೌಚಾಲಯವನ್ನು ಬಳಕೆಗೆ ಉಪಯೋಗಿಸದಿದ್ದರೆ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಜಗದೀಶ್ ಸಿ. ರತ್ನಮ್ಮ, ಗೋಪಿನಾಥ್ ಎಸ್. ಅವಿನಾಶ್, ರಾಜಣ್ಣ, ಪ್ರದೀಪ, ಹರೀಶ್, ಸುರೇಶ ಇನ್ನು ಮೊದಲಾದವರು ಪ್ರತಿಭಟನೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!