Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಖಜಾನೆಯಲ್ಲಿದ್ದ ಹಣವೆಲ್ಲ ಗ್ಯಾರಂಟಿ ಯೋಜನೆಗೆ ಹೋಗಿದೆ : ಬಿಎಸ್ ಯಡಿಯೂರಪ್ಪ ಗರಂ

---Advertisement---

 

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಬಿಎಸ್ವೈ ಪ್ರತಿಕ್ರಿಯೆ ನೀಡಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿರುವ ಸರ್ಕಾರವನ್ನು ಬಡಿದೆಬ್ಬಿಸಲು ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಖಜಾನೆಯಲ್ಲಿದ್ದ ಹಣವನ್ನೆಲ್ಲ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೇನೆ ಬಳಕೆ ಮಾಡಿಕೊಂಡಿದೆ. ಅವುಗಳನ್ನು ಅರ್ಧಂಬರ್ಧ ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣವಾಗಿ ನಿಂತು ಹೋಗಿವೆ‌. ಒಂದು ಕಿಲೋಮೀಟರ್ ನಷ್ಟು ರಸ್ತೆ ಮಾಡುವ ಯೋಗ್ಯತೆಯೂ ಸರ್ಕಾರಕ್ಕೆ ಇಲ್ಲ. ಆಡಳಿತದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದಿವಾಳಿಯಾಗಿರುವ ಸರ್ಕಾರವನ್ನು ಬಡಿದೆಬ್ಬಿಸಲು ಈ ಹೋರಾಟ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲು ಸುಮಾರು 20 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಬಿಜೆಪಿ ನಾಯಕರು ಪ್ರತಿಭಟನೆಯನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದಾರೆ. ಏನೇ ಸಮಸ್ಯೆ ಇದ್ದರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಹೀಗೆ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...