Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಡಿಸೆಂಬರ್ 14 ರಂದು ಕಾಂತರಾಜ್ ಮತ್ತು ಸದಾಶಿವ ಆಯೋಗದ ವರದಿಗಳ ಜಾರಿಗೆ ಒತ್ತಾಯಿಸಿ ಧರಣಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.13 : ಕಾಂತರಾಜ್ ಮತ್ತು ಸದಾಶಿವ ಆಯೋಗದ ಒಳ ಮೀಸಲಾತಿ ವರದಿಗಳ ಜಾರಿಗೆ ಒತ್ತಾಯಿಸಿ ಡಿ.14 ರಂದು ಬೆಳಿಗ್ಗೆ 11 ಕ್ಕೆ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಧರಣಿ ನಡೆಸಲಾಗುವುದೆಂದು ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಸಿ.ಕೆ.ಮಹೇಶ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಹಿಂದ ಜಾತಿಗಳ ಜನಸಂಖ್ಯೆ ಶೇ. ಎಂಬತ್ತರಷ್ಟಿದ್ದರೂ ಕೇವಲ ಇಪ್ಪತ್ತು ಪರ್ಸೆಂಟ್‍ನಷ್ಟಿರುವ ಬಲಾಢ್ಯ ಜಾತಿಗಳು ಅಹಿಂದ ವರ್ಗಕ್ಕೆ ಸಿಗಬೇಕಾದ ಸಂಪತ್ತನ್ನು ಕಬಳಿಸುತ್ತಿವೆ. ಆಯಾ ಜಾತಿಗೆ ಅನಗುವಣವಾಗಿ ಸಂಪತ್ತು ಹಂಚಿಕೆಯಾಗಬೇಕಾಗಿರುವುದರಿಂದ ಕಾಂತರಾಜ್ ವರದಿ ಹಾಗೂ ಸದಾಶಿವ ಆಯೋಗದ ಒಳ ಮೀಸಲಾತಿ ವರದಿಗಳನ್ನು ಸರ್ಕಾರ ಜಾರಿಗೆ ತರಬೇಕು. ಅಹಿಂದ ಜಾತಿಗಳ ಮತಗಳನ್ನು ಸರಕುಗಳನ್ನಾಗಿ ಮಾರ್ಪಡಿಸಿಕೊಂಡಿರುವ ಪ್ರಬಲರು ರಾಜಕೀಯವಾಗಿ ಅಧಿಕಾರ ಹಿಡಿದಿದ್ದಾರೆ. ಈಗಲಾದರೂ ಅಹಿಂದ ವರ್ಗದವರು ಎಚ್ಚೆತ್ತುಕೊಳ್ಳಬೇಕೆಂದು ಹೇಳಿದರು.

ಅಹಿಂದ ಜಾಗೃತಿ ವೇದಿಕೆ ಜಿಲ್ಲಾ ಪ್ರಧಾನ ಸಂಚಾಲಕ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ಹಿಂದುಳಿದ ಜಾತಿಗಳ ಅಭಿವೃದ್ದಿಗಾಗಿ ಮೊಟ್ಟ ಮೊದಲು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಧ್ವನಿ ಎತ್ತಿದಾಗ ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸುವುದಕ್ಕಾಗಿ ಕಾಕಾ ಕಾಲೇಲ್ಕರ್ ಆಯೋಗ ರಚನೆಯಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತು.

ಕೇಂದ್ರ ಸರ್ಕಾರ ಜಾರಿ ಮಾಡಿದ ಮಂಡಲ್ ವರದಿ ಮೂಲೆಗುಂಪಾಗಿದೆ ಎಂದರು.
ಪ್ರೊ.ಬಿ.ಕೃಷ್ಣಪ್ಪ ನೇತೃತ್ವದಲ್ಲಿ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ವರದಿಗಳ ಜಾರಿಗಾಗಿ ದಲಿತರು, ಅಹಿಂದ ವರ್ಗದವರು ತೀವ್ರ ಪ್ರತಿಭಟನೆ ನಡೆಸಿದ ಫಲವಾಗಿ ಡಿ.ದೇವರಾಜ್ ಅರಸುರವರು ಮುಖ್ಯಮಂತ್ರಿಯಾಗಿದ್ದಾಗ ಎಲ್.ಜಿ.ಹಾವನೂರು ಆಯೋಗ ರಚಿಸಿ ವರದಿ ಸಿದ್ದಪಡಿಸಿದ್ದನ್ನು ಬಲಾಢ್ಯರು ಉಗ್ರವಾಗಿ ಪ್ರತಿಭಟಿಸಿದರು.

ಹಾಗಾಗಿ ಕಾಂತರಾಜ್ ಮತ್ತು ಸದಾಶಿವ ಆಯೋಗದ ಒಳ ಮೀಸಲಾತಿ ವರದಿ ಜಾರಿಗಾಗಿ ಗುರುವಾರ ಹಮ್ಮಿಕೊಂಡಿರುವ ಧರಣಿಯಲ್ಲಿ ಅಹಿಂದ ಜಾತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅಹಿಂದ ಜಾಗೃತಿ ವೇದಿಕೆ ಜಿಲ್ಲಾ ಸಂಚಾಲಕರುಗಳಾದ ಹೆಚ್.ಮಂಜಪ್ಪ, ಡಿ.ದುರುಗೇಶಪ್ಪ, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಬಿ.ಕಾಂತರಾಜ್, ಹೆಚ್.ಸಿ.ನಿರಂಜನಮೂರ್ತಿ, ಮಾಜಿ ಉಪಾಧ್ಯಕ್ಷ ರಾಮಜ್ಜ, ಮಾಜಿ ಸದಸ್ಯ ಶ್ರೀರಾಮ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment