Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಮಧು ಬಂಗಾರಪ್ಪನವರಿಗೆ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್.15 : ಬೆಳಗಾವಿಯ ಸುವರ್ಣ ಸೌಧದಲ್ಲಿ ಹತ್ತು ದಿನಗಳ ಕಾಲ ನಡೆದ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪನವರನ್ನು ಭೇಟಿ ಮಾಡಿ ರಾಜ್ಯದ 33 ಜಿಲ್ಲೆಗಳಲ್ಲಿ ಖಾಲಿಯಿರುವ ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡುವುದು, ಜಿಲ್ಲಾ ಹಂತದಲ್ಲಿ ವೃತ್ತಿ ಶಿಕ್ಷಣ ಶಿಕ್ಷಕರು ಗ್ರೇಡ್-2, ವೃತ್ತಿ ಶಿಕ್ಷಣ ಶಿಕ್ಷಕರ ಜೇಷ್ಟತಾ ಪಟ್ಟಿ ಸಿದ್ದಪಡಿಸುವುದು. ಜೇಷ್ಠತೆ ಹಾಗೂ ರೋಸ್ಟರ್ ಪ್ರಕಾರ ಗೈಡ್-1 ವೃತ್ತಿ ಶಿಕ್ಷಣ ಶಿಕ್ಷಕರ ಹುದ್ದೆಗೆ ಬಡ್ತಿ, ವೇತನ ತಾರತಮ್ಯ ನಿವಾರಿಸುವಂತೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ.ಕಾವೇರಿ ಈ ಸಂದರ್ಭದಲ್ಲಿದ್ದರು.

ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷ ಬಿ.ಎನ್.ರಾಮರೆಡ್ಡಿ, ಎಸ್.ವಾಸು, ಚಿತ್ರದುರ್ಗ ಡಿ.ಡಿ.ಪಿ.ಐ. ಕಚೇರಿಯ ವಿಷಯ ಪರಿವೀಕ್ಷಕ ಎಸ್.ಟಿ.ಮಹಾಲಿಂಗಪ್ಪ, ಬತುಲ್ ಅಕ್ಬರ್, ಕೆ.ಎಚ್.ಎಂ.ವಿಶ್ವನಾಥ, ನಾಗಪ್ಪ, ಸೋಮಣ್ಣನವರ್, ಜಿ.ಎಸ್.ನರೇಗಲ್, ಶ್ರೀಮತಿ ಯು.ಟಿ.ಉಂಡೆಕಾರ್ ಇನ್ನು ಮುಂತಾದವರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

error: Content is protected !!