ನಿನ್ನೆಯ ವಿಧಾನಸಭಾ ಅಧಿವೇಶನದಲ್ಲಿ ಬೆಳಗಾವಿ, ಹುಬ್ಬಳ್ಳಿ, ಮೈಸೂರು, ವಿಜಯಪುರ ವಿಮಾನ ನಿಲ್ದಾಣಗಳಿಗೆ ಹೆಸರಿಡುವುದಕ್ಕೆ ನಿರ್ಧಾರ ಮಾಡಲಾಗಿದ್ದು, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದು, ಟಿಪ್ಪು ಬದಲಿಗೆ. ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣ ರಾಜೇಂದ್ರ ಒಡೆಯರ್ ಹೆಸರಿಡುವುದಕ್ಕೆ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಟ್ವೀಟ್ ಮಾಡಿದ್ದಾರೆ. ಅಂಗೀಕಾರದ ವೇಳೆಗೆನೆ ಬಿಜೆಪಿ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದರು.
ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಮಾಡಲಾಗಿತ್ತು. ಆಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದ್ದರು. ಹಾಗೂ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಅವರು ಒತ್ತಾಯಿಸಿದ್ದರು. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂಬಿ ಪಾಟೀಲ್ ಅವರು ಮಂಡಿಸಿದರು. ಈ ನಿರ್ಣಯವು ಅಂಗೀಕಾರ ಪಡೆಯಿತು.