ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.16 : ಎಸ್ಸಿ ಮೀಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪನವರ ಪುತ್ರ ಜಿ.ಹೆಚ್.ಮೋಹನ್‍ಗೆ ಟಿಕೆಟ್ ನೀಡುವಂತೆ ಅಖಿಲ ಕರ್ನಾಟಕ ಛಲವಾದಿ ಮಹಾಸಭಾದಿಂದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪನವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಗಳಿಂದ ಅಹವಾಲು ಸ್ವೀಕರಿಸಲು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸುತ್ತಿದ್ದ ಸಚಿವ ಹೆಚ್.ಸಿ.ಮಹದೇವಪ್ಪನವರಿಗೆ ಐಮಂಗಲ ಸಮೀಪ ಬುದ್ದನ ಪ್ರತಿಮೆ ನೀಡಿದ ಛಲವಾದಿ ಜನಾಂಗದವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ವರ್ಷಗಳಿಂದಲೂ ಪಕ್ಷದಲ್ಲಿ ನಿಷ್ಟಾವಂತರಾಗಿರುವ ಜಿ.ಹೆಚ್.ಮೋಹನ್ ಯಾವುದೇ ಫಲಾಪೇಕ್ಷೆಯಿಲ್ಲದೆ ಪಕ್ಷಕ್ಕೆ ನಿಷ್ಟರಾಗಿದ್ದಾರೆ.
ಜಿಲ್ಲೆಯಲ್ಲಿ ಛಲವಾದಿ ಜನಾಂಗಕ್ಕೆ ಇದುವರೆವಿಗೂ ಯಾವುದೆ ರಾಜಕೀಯ ಪಕ್ಷಗಳು ಪ್ರಾತಿನಿಧ್ಯ ನೀಡಿಲ್ಲ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿ.ಹೆಚ್.ಮೋಹನ್‍ಗೆ ಕಾಂಗ್ರೆಸ್‍ನಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ವಿನಂತಿಸಿದರು.
ಅಖಿಲ ಕರ್ನಾಟಕ ಛಲವಾದಿ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹಾಲೇಶಪ್ಪ, ಜಿಲ್ಲಾ ಗೌರವಾಧ್ಯಕ್ಷ ಹೆಚ್.ಅಣ್ಣಪ್ಪಸ್ವಾಮಿ, ಶಿವಪ್ರಸಾದ್, ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ರಾಜಗಿರಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










