ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಹೀಗಾಗಿ ಎಲ್ಲರೂ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಪಡೆದು ಸೋಲು ಕಂಡಿದ್ದರು. ಲೋಕಸಭೆಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಇತ್ತು. ಅದಕ್ಕೆ ಇಂದು ಉತ್ತರ ನೀಡಿದ್ದಾರೆ.
ಇಂದು ಜಗದೀಶ್ ಶೆಟ್ಟರ್ ಅವರ ಹುಟ್ಟುಹಬ್ಬ. ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನೊವಾಸಕ್ಕೆ ತೆರಳಿ ಶುಭಕೋರಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆಯ ಕುರಿತು ಮಾಧ್ಯಮದವರು ಪ್ರಶ್ನೆ ಕೇಳಿದ್ದಾರೆ. ಧಾರವಾಡ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಬಗ್ಗೆ ಪ್ರಶ್ನೆ ಕೇಳೊದಾಗ, ಸಿಎಂ ಸಿದ್ದರಾಮಯ್ಯ ಅವರು, ಶೆಟ್ಟರ್ ಕೂಡ ಆಕಾಂಕ್ಷಿ ಎಂದು ಭಾವಿಸುತ್ತೇವೆ ಎಂದಿದ್ದಾರೆ. ಆದರೆ ತಕ್ಷಣ ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್, ನಾನು ಆಕಾಂಕ್ಷಿಯಲ್ಲ ಎಂದಿದ್ದಾರೆ.
ಶಾಸಕರು, ಹಿಂದಿನ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಧರಿಸಿ ಟಿಕೆಟ್ ನೀಡಲಾಗುವುದು. ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಸಚಿವರು ಮೂರು ಆಕಾಂಕ್ಷಿಗಳ ಹೆಸರನ್ನು ನೀಡಿ, ಹೆಚ್ಚು ಸೂಕ್ತರನ್ನು ಆಯ್ಕೆ ಮಾಡಲಾಗುವುದು. ಈ ಬಾರಿಯೂ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಬಿಜೆಪಿಯವರು ತಮಗೆ ಮುಸ್ಲಿಮರ ಮತಗಳ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಮುಸ್ಲಿಮರು ಭಾರತೀಯರಲ್ಲವೇ? ನಮ್ಮದು ಬಹುಸಂಸ್ಕೃತಿಯ ದೇಶವಾಗಿದೆ ಮತ್ತು ಎಲ್ಲ ನಾಗರಿಕರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದಿದ್ದಾರೆ.