ಸುದ್ದಿಒನ್ : ಚೀನಾದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ವಾಯುವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 6.2 ದಾಖಲಾಗಿದೆ. ಸ್ಥಳೀಯ ಕಾಲಮಾನದ ಪ್ರಕಾರ, ಸೋಮವಾರ ಮಧ್ಯರಾತ್ರಿಯ ನಂತರ ಭೂಕಂಪ ಸಂಭವಿಸಿದೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದು ಸುಮಾರು 110 ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
https://x.com/Sarah83336937/status/1736828201513439545?s=20
ಭೂಕಂಪದಿಂದಾಗಿ ಹಲವು ಕಟ್ಟಡಗಳು ಕುಸಿದಿವೆ. ಜನರು ಆತಂಕದಿಂದ ಓಡಿದರು. ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ. ಕುಸಿದ ಕಟ್ಟಡಗಳ ವಿಡಿಯೋಗಳು ಸ್ಥಳೀಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಚೀನಾದಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪ್ರತಿಕ್ರಿಯಿಸಿದ್ದು, ಕೂಡಲೇ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ಸದ್ಯ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ಭೂಕಂಪದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.