ಬೆಂಗಳೂರು: ಕೋರೊನಾ ವೈರಸ್ ನೋಡ ನೋಡುತ್ತಿದ್ದಂತೆ ಹೆಚ್ಚಾಗಿಯೇ ಹಬ್ಬುತ್ತಿದೆ. ನಿನ್ನೆ ಒಂದೇ ದಿನಕ್ಕೆ 44 ಪಾಸಿಟಿವ್ ಕೇಸ್ ಗಳು ಕಾಣಿಸಿಕೊಂಡಿದ್ದವು. ಇದೀಗ ಕರ್ನಾಟಕದಲ್ಲಿ ವೈರಸ್ ನಿಂದ ಒಂದು ಸಾವು ಕೂಡ ಸಂಭವಿಸಿದೆ. ಈ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ನಿನ್ನೆ ಕೊರೊನಾ ವೈರಸ್ ಸೋಂಕಿಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. JN.1 ವೈರಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.
ಕೇಂದ್ರ ಆರೋಗ್ಯ ಸಚಿವ ಮುನ್ಸೂಖ್ ಮಾಂಡವೀಯ ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳ ಸಚಿವರ ಜೊತೆಗೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುನ್ನೆಚ್ಚರಿಕೆಯ ಕ್ರಮದ ಬಗ್ಗೆ ಚರ್ಚೆ ನಡೆಸಿಲಾಗಿದೆ. ರಾಜ್ಯದಲ್ಲಿ ನಿಗಾ ವಹಿಸಬೇಕಾದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು, ಗುರುವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೂ ಚರ್ಚೆ ನಡೆಸಲಿದ್ದಾರೆ.
ಉಳಿದಂತೆ ಕೊರೊನಾ ವೈರಸ್ ಬರುತ್ತಿರುವ ಸೂಕ್ಷ್ಮತೆ ಕಂಡಾಗಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಅದಾಗಲೇ ಗಡಿ ಭಾಗದಲ್ಲಿ ತಪಾಸಣೆಯನ್ನು ನಡೆಸುತ್ತಿದ್ದಾರೆ. ಬೇರೆ ರಾಜ್ಯದಿಂದ ಬಂದಂತವರ ಮೇಲೆ ನಿಗಾ ವಹಿಸಲಾಗಿದೆ. ರೋಗ ಲಕ್ಷಣ ಕಂಡು ಬಂದವರಲ್ಲಿ ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಲಾಗಿದೆ. ಜನ ಕೂಡ ಇದರಿಂದ ಎಚ್ಚೆತ್ತುಕೊಂಡು, ಮಾಸ್ಕ್, ಸ್ಯಾನಿಟೈಸರ್ ನಂತ ಮೂಲಭೂತ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.