Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಬಳಿ ಅನಾಮಧೇಯ ಶವ ಪತ್ತೆ : ವಾರಸುದಾರರ ಪತ್ತೆಗೆ ಮನವಿ

---Advertisement---

 

ಚಿತ್ರದುರ್ಗ. ಡಿ.20:  ನಗರದ ಜಿಲ್ಲಾ ಆಸ್ಪತ್ರೆಯ ಪಾರ್ಕ್ ಹಿಂಭಾಗ ಸುಮಾರು 35 ರಿಂದ 40 ವರ್ಷದ ಗಂಡಸಿನ ಅನಾಮಧೇಯ ಶವ ಪತ್ತೆಯಾಗಿರುವ ಪ್ರಕರಣ 2023ರ ಡಿ.15 ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸುಮಾರು 35-40 ವರ್ಷ, ಸುಮಾರು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ತಲೆಯಲ್ಲಿ ಸುಮಾರು 2 ಇಂಚು ಕಪ್ಪು ಕೂದಲು, ಕುರುಚಲು ಗಡ್ಡ, ವ್ಯಕ್ತಿಯ ಮೈಮೇಲೆ ಕ್ರೀಮ್‍ಬಣ್ಣದ ಸಣ್ಣ ಚೆಕ್ಸ್‍ವುಳ್ಳ ಅರ್ಧತೋಳಿನ ಶರ್ಟ್, ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾನೆ.

ಮೃತ ಅನಾಮಧೇಯ ವ್ಯಕ್ತಿಯ ವಿಳಾಸ ಪತ್ತೆಯಾಗದ ಕಾರಣ ಜಿಲ್ಲಾ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಈ ಗಂಡಸಿನ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ನಗರ ಪೊಲೀಸ್ ಠಾಣೆ 9480803146, ಜಿಲ್ಲಾ ಕಂಟ್ರೋಲ್ ರೂಂ 9480803100 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment