ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.22 : ದಾವಣಗೆರೆಯ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ.23 ಮತ್ತು 24 ರಂದು ನಡೆಯುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ಮಹಾ ಅಧಿವೇಶನದ ಅಂಗವಾಗಿ ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಶುಕ್ರವಾರ ಹೊರಟ ಬೈಕ್‍ರ್ಯಾಲಿ ನಗರದ ರಾಜಬೀದಿಗಳಲ್ಲಿ ಸಂಚರಿಸಿತು.
ಚಿಕ್ಕಪೇಟೆ, ದೊಡ್ಡಪೇಟೆ, ಜೋಗಿಮಟ್ಟಿ ರಸ್ತೆ, ಸ್ಟೇಡಿಯಂ ರೋಡ್, ಜೆಸಿಆರ್.ಬಡಾವಣೆ, ಕಾನ್ವೆಂಟ್ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬೈಕ್‍ರ್ಯಾಲಿ ಮುಕ್ತಾಯಗೊಂಡಿತು.
ಅಖಿಲ ಭಾತರ ವೀರಶೈವ-ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಮಹೇಶ್, ಭೀಮಸಮುದ್ರದ ಜಿ.ಎಸ್.ಅನಿತ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಹೋದರ ನಾಗರಾಜ್, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೀನಾ ವೀರಭದ್ರಪ್ಪ, ಸಿದ್ದವ್ವನಹಳ್ಳಿ ಎಸ್.ಪರಮೇಶ್, ಪಿಳ್ಳೆಕೆರನಹಳ್ಳಿ ಬಸವರಾಜ್, ಮಲ್ಲಿಕಾರ್ಜುನ್, ನಾಗರಾಜ್ ಸಂಗಂ, ಎಸ್.ವೀರೇಶ್, ಶ್ಯಾಮಲ ಶಿವಪ್ರಕಾಶ್, ಆರತಿ ಮಹಡಿ ಶಿವಮೂರ್ತಿ, ನಂದಿ ನಾಗರಾಜ್ ಇನ್ನು ಅನೇಕರು ಬೈಕ್‍ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















