Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ನಾಯಿ ದಾಳಿ : ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು

---Advertisement---

 

 

ಸುದ್ದಿಒನ್, ಹಿರಿಯೂರು, ಡಿಸೆಂಬರ್. 25 : ಊಟ ತರಲು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಮೂರು ನಾಯಿಗಳು ದಾಳಿ ನಡೆಸಿ, ಕಾರ್ಮಿಕನನ್ನು ಕಚ್ಚಿ ಗಾಯಗೊಳಿಸಿದ ಘಟನೆ  ನಂದಿಹಳ್ಳಿ ಸಮೀಪ ಭಾನುವಾರ ರಾತ್ರಿ ನಡೆದಿದೆ.

ಶಿರಾ ತಾಲೂಕಿನ ಯರದಕಟ್ಟೆ ಗ್ರಾಮ ಮಧು (23 ವರ್ಷ) ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

ತಾಲೂಕಿನ ನಂದಿಹಳ್ಳಿ ಬಳಿ ಇರುವ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ನಾಯಿಗಳು ವ್ಯಕ್ತಿ ಮೇಲೆ ದಾಳಿ ಮಾಡಿ ಬಲಗೈಯನ್ನು ರಕ್ತ ಸುರಿಯುವಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದು, ನಾಯಿಯ ದಾಳಿಗೆ ಒಳಗಾಗಿರುವ ವ್ಯಕ್ತಿ ಘಡ ಘಡ ನಡುಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಂದಿಹಳ್ಳಿ ಬಳಿ ಕೆಲಸಕ್ಕೆ ಬಂದಿದ್ದ ಬಡ ಕಾರ್ಮಿಕ ಮಧು ಊಟ ತರಲು ನಂದಿಹಳ್ಳಿ ಕಡೆಯಿಂದ ಆದಿವಾಲ ಕಡೆಗೆ ನಡೆದು ಕೊಂಡು ಬರುವಾಗ ಶಿಕ್ಷಣ ಸಂಸ್ಥೆಯ ನಾಯಿಗಳು ದಾಳಿ ನಡೆಸಿವೆ. ಕಾರ್ಮಿಕನ ಕಿರುಚಾಟ ಕೇಳಿ ವಾಹನ ಸವಾರರು ರಕ್ಷಿಸಿದ್ದಾರೆ.

ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇರಬೇಕಿದ್ದ ನಾಯಿಗಳು ರಸ್ತೆಗೆ ಬಂದು ಅಮಾಯಕನ ಮೇಲೆ ದಾಳಿಯನ್ನು ಖಂಡಿಸಿ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.  ಆಸ್ಪತ್ರೆ ಬಳಿ ಬಂದು ಗಾಯಳನ್ನು ನೋಡುತ್ತಾ ನಿಂತಿದ್ದ
ಸಂಸ್ಥೆಯವರನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅಮಾಯಕನ ಜೀವಕೆ ಹೆಚ್ಚು ಕಡಿಮೆ ಆದರೆ ನೀವೇ ಹೊಣೆಗಾರರು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment