Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯಡಿಯೂರಪ್ಪ ಅವರು ಮರ್ಯಾದೆಗೆ ಹೆದರಿ ದೂರು ನೀಡಿಲ್ಲ ಎನ್ನುತ್ತಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್

---Advertisement---

ವಿಜಯಪುರ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರರ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಾಗ ಮಾತಿನ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇಂದು ಕೂಡ ವಾಗ್ದಾಳಿ ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದರು, ಅವರದ್ದೇನು ನಡೆಯುತ್ತಿಲ್ಲ.‌ ಆದರೆ ಮರ್ಯಾದೆ ಹೋಗಬಾರದು ಎಂಬ ಕಾರಣಕ್ಕೆ ದೂರು ನೀಡಿಲ್ಲ ಎನ್ನುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಕುನಿ ಇದ್ದ ಹಾಗೆ. ಈ ಹಿಂದೆ ಶೋಭಾ ಕರಂದ್ಲಾಜೆ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗಲೂ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದರು. ಈ ಮಾತನ್ನು ವಿಜಯೇಂದ್ರ ಕೂಡ ಹೇಳಿದ್ದರು. ಆದರೆ ಅಷ್ಟರಲ್ಲಾಗಲೇ ಹೈಕಮಾಂಡ್ ಬಳಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು. ಅವರು ಹೇಳುವುದೆಲ್ಲಾ ಉಲ್ಟಾ ಆಗುತ್ತೆ. ಬಿಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ಆದರೆ ಮರ್ಯಾದೆ ಹೋಗಬಾರದು ಎಂಬ ಕಾರಣಕ್ಕೆ ದೂರು ನೀಡಿಲ್ಲ ಎನ್ನುತ್ತಾರೆ ಎಂದಿದ್ದಾರೆ.

ಇದೇ ವೇಳೆ ಹಿಜಾಬ್ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಯತ್ನಾಳ್, ಇದೇ ರೀತಿ ಡ್ರೆಸ್ ಕೋಡ್ ಇರಬೇಕು ಎಂದು, ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಎಲ್ಲಿಯೂ ಹಸ್ತಕ್ಷೇಪ ಮಾಡಿರಲಿಲ್ಲ. ಇಡೀ ದೇಶದಲ್ಲಿ ಎಲ್ಲಿಯೂ ಈ ವಿಚಾರ ಇಲ್ಲ. ಆದರೆ ಕರ್ನಾಟಕದಲ್ಲಿ ಯಾಕೆ..? ಇದು ಇವರೇ ತೆಗೆದಿರುವುದು. ಈ ವಿಚಾರ ಖಂಡಿತ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಗೆ ಮುಳುವಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...