Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ಕ್ಯಾಂಪ್ ಆಯೋಜನೆ

---Advertisement---

 

 

ದಾವಣಗೆರೆ, ಡಿ. 26 : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಡಿ. 27 ರಿಂದ 29 ರವರೆಗೆ ಕ್ಯ್ಯಾಂಪ್‍ಗಳನ್ನು ಆಯೋಜಿಸಲಾಗಿದೆ.

ಕ್ಯಾಂಪ್‍ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ,. ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹಾರ ಒದಗಿಸಲಾಗುತ್ತದೆ.

ಫಲಾನುಭವಿಗಳು ನಿಗಧಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬಹುದು. ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment