Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ  ಬಿಸಿಯೂಟ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.27 : ತಾಲೂಕಿನ ಬೀರಾವರ ಗ್ರಾಮದ ಸರ್ಕಾರಿ  ಶಾಲೆಯಲ್ಲಿ ಮಧ್ಯಾಹ್ನದ  ಬಿಸಿಯೂಟ ಸೇವಿಸಿದ ನಂತರ 40 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ.

ತಾಲೂಕಿನ ಬೀರಾವರದ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ  ಬಡಿಸಲಾಗಿತ್ತು. ಈ ಬಿಸಿಯೂಟ ಸೇವನೆ ಬಳಿಕ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ.  ಹಲವು ವಿದ್ಯಾರ್ಥಿಗಳು ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ.

ಕೂಡಲೇ ಬಿಸಿಯೂಟ ಸೇವನೆಯಿಂದ ಅಸ್ವಸ್ಥರಾದಂತ ಶಾಲೆಯ ವಿದ್ಯಾರ್ಥಿಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಚಿಕಿತ್ಸೆಯ ಬಳಿಕ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಈ ವಿಷಯ ತಿಳಿದು ಚಿತ್ರದುರ್ಗ ತಾಲೂಕಿನ ಬೀರಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment