ಚಿತ್ರದುರ್ಗ ಡಿ. 28 : ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಜ. 02 ರಂದು ಬೆ. 10.30 ಕ್ಕೆ ಹೊಳಲ್ಕೆರೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಒಳಾಂಗಣ ಆಡಿಟೋರಿಯಂ (ಸಂವಿಧಾನ ಸೌಧ) ನಲ್ಲಿ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಏರ್ಪಡಿಸಲಾಗುತ್ತಿದ್ದು, ಅದರನ್ವಯ ಜನತಾ ದರ್ಶನ ಇದೇ ಜ. 02 ರಂದು ಬೆಳಿಗ್ಗೆ 10.30 ಕ್ಕೆ ಹೊಳಲ್ಕೆರೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಒಳಾಂಗಣ ಆಡಿಟೋರಿಯಂ (ಸಂವಿಧಾನ ಸೌಧ) ನಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್‍ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















