Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಸೂಪರ್ ಚೆಕ್ :  ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಭೇಟಿ

---Advertisement---

ಚಿತ್ರದುರ್ಗ.ಡಿ.29:  ಜಿಲ್ಲೆಯಲ್ಲಿ ಜರುಗುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಚುನಾವಣಾ ಆಯೋಗದ ಸೂಚನೆಯಂತೆ ಸೂಪರ್ ಚೆಕ್ ನಡೆಸುವ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶುಕ್ರವಾರ ನಗರದ ವಿವಿಧ ಮತಗಟ್ಟೆಗಳಿಗೆ ಹಾಗೂ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾಧಿಕಾರಿಗಳು ವಿವಿಧ ಮತಗಟ್ಟೆಗಳಿಗೆ ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ಕೈಗೊಂಡರು.  ಇದರ ಅಂಗವಾಗಿ, ನಗರದ  ಚೇಳುಗುಡ್ಡ, ಬುರುಜನಹಟ್ಟಿ, ರಂಗಯ್ಯನಬಾಗಿಲು ಸೇರಿದಂತೆ ವಿವಿಧ ಪ್ರದೇಶಗಳ ಮತಗಟ್ಟೆಗಳಿಗೆ ಹಾಗೂ ಈ ವ್ಯಾಪ್ತಿಯ ಮನೆಗಳಿಗೆ ಖುದ್ದು ಭೇಟಿ ನೀಡಿದ ಅವರು, ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ, ನಿಷ್ಕ್ರಮಣೆ (ಡಿಲೀಟ್) ಕುರಿತು ಮತಗಟ್ಟೆ ಅಧಿಕಾರಿಗಳಿಂದ ಮಾಹಿತಿ ಪಡೆದರು.  ಮತದಾರ ಪಟ್ಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ಬದಲಾವಣೆಗಾಗಿ ಅರ್ಜಿ ಸಲ್ಲಿಸಿದ   ಫಾರಂ-6 ಹಾಗೂ 7 ಅರ್ಜಿಗಳ ಮೇಲ್ವಿಚಾರಣೆ ನಡೆಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಸೇರಿದಂತೆ ವಿವಿಧ ಸಿಬ್ಬಂದಿ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...