ಚಿತ್ರದುರ್ಗ ಡಿ. 30 : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಡಿ. 31 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಸಂಜೆ ಶಿವಮೊಗ್ಗದಿಂದ ಹೊರಟು ಸಂಜೆ 04 ಗಂಟೆಗೆ ತಾಲ್ಲೂಕಿನ ಸೀಬಾರ ಗುತ್ತಿನಾಡಿಗೆ ಆಗಮಿಸಲಿದ್ದು, ವಿಶ್ವಮಾನವ ಸಾಂಸ್ಕøತಿಕ ವಿದ್ಯಾಸಂಸ್ಥೆ ವತಿಯಿಂದ ಏರ್ಪಡಿಸಿರುವ ರಜತ ಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಬಳಿಕ ಸಂಜೆ 05 ಗಂಟೆಗೆ ಸಿರಿಗೆರೆಗೆ ತೆರಳಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿರುವ ತರಳಬಾಳು ಕ್ರೀಡಾಮೇಳದ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಚಿವರು ಅದೇ ದಿನ ಸಂಜೆ 06 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















