ಚಿತ್ರದುರ್ಗ | ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗೆ ಆಹ್ವಾನ : ಶೀಘ್ರದಲ್ಲಿ ದಿನಾಂಕ ನಿಗದಿ ಭರವಸೆ

1 Min Read

 

ಸುದ್ದಿಒನ್, ಚಿತ್ರದುರ್ಗ, ಜನವರಿ. 01 : ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಶೀಘ್ರದಲ್ಲಿ ದಿನಾಂಕ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ ಅವರು ಭಾನುವಾರ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಭೇಟಿಯಾಗಿದ್ದ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಎರಡು ಜಿಲ್ಲೆಗಳ ಸಂಯುಕ್ತಾಶ್ರಯದಲ್ಲಿ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದಲ್ಲಿ ರಾಜ್ಯ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುತ್ತದೆ. ಆದರೆ ಅಂತರ ಜಿಲ್ಲಾ ಸಮ್ಮೇಳನ ಹೊಸ ರೀತಿಯ ಚಿಂತನೆಯಾಗಿದೆ. ಇದರಿಂದ ಎರಡು ಜಿಲ್ಲೆಗಳ ಕಲೆ,ಸಾಹಿತ್ಯ ಮತ್ತು ಸಂಸ್ಕøತಿಗಳ ಚಿಂತನೆಗೆ ಇದು ಅವಕಾಶ ಮಾಡಿಕೊಡಲಿದೆ.

ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕು ಎನ್ನುವ ಉದ್ದೇಶಕ್ಕಾಗಿ ಈ ಮುಂಚೆ ನಿಗದಿಪಡಿಸಿದ್ದ ಡಿ.30 ಮತ್ತು 31 ದಿನಾಂಕಗಳನ್ನು ಮುಂದೂಡಲಾಗಿದೆ. ಈ ಸಮ್ಮೇಳನಕ್ಕಾಗಿ ಎರಡು ಜಿಲ್ಲೆಗಳ ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಮುಖ್ಯಮಂತ್ರಿಗಳು ನೀಡಿದ ದಿನಾಂಕದಂದು ಸಮ್ಮೇಳನ ಆಯೋಜಿಸಲು ಸಂಘಟಕರು ಸಮ್ಮೇಳನ ಆಯೋಜಿಸಲು ಸಿದ್ಧರಾಗಿದ್ದಾರೆ. ಉಭಯ ಜಿಲ್ಲೆಗಳ ಕಸಾಪ ಪದಾಧಿಕಾರಿಗಳು ಸಾಹಿತ್ಯ ಸಮ್ಮೇಳನದ ಬಗ್ಗೆ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿಗಳು ಶೀಘ್ರದಲ್ಲಿ ಇದಕ್ಕೆ ದಿನಾಂಕ ನೀಡಲಾಗುವುದು. ಈ ಬಗ್ಗೆ ಕಾರ್ಯಧ್ಯಕ್ಷ ಬಿ.ಎನ್.ಚಂದ್ರಪ್ಪನವರಿಗೆ ಈಗಾಗಲೇ ಒಮ್ಮೆ ತಿಳಿಸಲಾಗಿದೆ. ಶೀಘ್ರದಲ್ಲಿ ದಿನಾಂಕ ನೀಡುವುದಾಗಿ ಭರವಸೆ ನೀಡಿದರು.
ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎ.ಸಿ.ಚಂದ್ರಪ್ಪ, ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ, ಹೊಳಲ್ಕೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಓಂಕಾರಪ್ಪ, ಅಜ್ಜಂಪು ಕಸಾಪ ಅಧ್ಯಕ್ಷ ಚಂದ್ರಣ್ಣ, ಸಾಣೇಹಳ್ಳಿ ನಾಟಕ ಕಾಲೇಜಿನ ಉಪನ್ಯಾಸಕ ಐ.ಜಿ.ಚಂದ್ರಶೇಖರಪ್ಪ ಮತ್ತಿತರರಿದ್ದರು.

Share This Article
Leave a Comment

Leave a Reply

Your email address will not be published. Required fields are marked *