Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಲವರು ರಾತ್ರೋ ರಾತ್ರಿ ಬಂದು ಭೇಟಿಯಾಗುತ್ತಾರೆ : ಬಿಜೆಪಿ ನಾಯಕರ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಎಸ್ ಟಿ ಸೋಮಶೇಖರ್

---Advertisement---

ಬೆಂಗಳೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಭೇಟಿ ನೀಡಿದ್ದರು. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮುನ್ನವೇ ಕಾಂಗ್ರೆಸ್ ನಾಯಕರ ಜೊತೆಗೆ ಎಸ್ ಟಿ ಸೋಮಶೇಖರ್ ಗುರುತಿಸಿಕೊಂಡಿದ್ದರು. ಹೀಗಾಗಿ ಮತ್ತೆ ಕಾಂಗ್ರೆಸ್ ಗಡ ಬರುತ್ತಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಅದರ ನಡುವೆ ಇದೀಗ ಇಂದಿನ ಭೇಟಿ ಬಗ್ಗೆ ಸೋಮಶೇಖರ್ ಅವರೇ ಸ್ಪಷ್ಟನೆ ನೀಡಿದ್ದಾರೆ.

 

ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಎಸ್ ಟಿ ಸೋಮಶೇಖರ್ ಅವರು, ಬೆಂಗಳೂರು ನಿಮ್ಮ ನೇತೃತ್ವದಲ್ಲಿ ಅಭಿವೃದ್ಧಿ ಆಗುತ್ತಾ ಇದೆ. ನಮ್ಮ ಕ್ಷೇತ್ರದ ಕಡೆಗೂ ಸ್ವಲ್ಪ ಗಮನ ಕೊಡಿ ಎಂದು ಕೇಳಿದ್ದೇವೆ. ನಮ್ಮ ಕ್ಷೇತ್ರದ ಅಭಿವೃದ್ಧಿ ಆಗಬೇಕು ಎಂದಿದ್ದೇನೆ ಎಂದು ಮಾಹಿತಿ ನೀಡಿದರು.

 

ಇದೆ ವೇಳೆ ಬಿಜೆಪಿಯ ಬೇರೆ ನಾಯಕರು ಕೂಡ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರಾ ಎಂಬ ಮಾತಿಗೆ ಉತ್ತರಿಸಿದ ಎಸ್ ಟಿ ಸೋಮಶೇಖರ್, ಬಿಜೆಪಿಯ ಕೆಲ ನಾಯಕರು ಕೂಡ ಡಿಕೆ ಶಿವಕುಮಾರ್ ಭೇಟಿ ಮಾಡಲು ಬರುತ್ತಾರೆ. ಕೆಲವರು ರಾತ್ರೋ ರಾತ್ರಿ ಬಂದು ಭೇಟಿಯಾಗುತ್ತಾರೆ. ಇನ್ನು ಕೆಲವರು ಮಾಧ್ಯಮದವರ ಕಣ್ಣು ತಪ್ಪಿಸಿ ಭೇಟಿಯಾಗುತ್ತಾರೆ. ಆದರೆ ನಮ್ಮದೇನು ಬ್ಲಾಕು, ವೈಟು ಇಲ್ಲ. ಹೀಗಾಗಿ ರಾಜಾರೋಷವಾಗಿ ಬರುತ್ತೀವಿ. ಕ್ಷೇತ್ರದ ವಿಚಾರಕ್ಕೆ ಬರುತ್ತೀವಿ. ಮಾತನಾಡಿ ಹೋಗುತ್ತೀವಿ‌ ಕೆಲವರು ನಾನು ಇದ್ದಾಗಲೇ ಸಾಕಷ್ಟು ಸಲ ಬಂದಿದ್ದಾರೆ. ನೀವೂ ಅವರನ್ನು ಗಮನಿಸುವುದಿಲ್ಲ.

 

ಬರೀ ಯಶವಂತಪುರ ಕ್ಷೇತ್ರದ ಶಾಸಕರನ್ನಷ್ಟೇ ಗುರುತಿಸುತ್ತೀರಿ ಎಂದು ಹೇಳಿದ ಎಸ್ ಟಿ ಸೋಮಶೇಖರ್, ಮಾಧ್ಯಮದವರಿಗೂ ಹಾಗೂ ನಾಡಿನ ಜನತೆಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment