Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹೊಸವರ್ಷದ ದಿನ ಕೋಟೆ ರಸ್ತೆಯಲ್ಲಿ ತಪ್ಪಿದ ಭಾರಿ ಅನಾಹುತ : ವಿಡಿಯೋ ನೋಡಿ…!

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ, 01 : ನಗರದ ಕೋಟೆ ರಸ್ತೆಯಲ್ಲಿ ಹೊಸ ವರ್ಷದ ದಿನವೇ ಸರಣಿ ಅಪಘಾತ ಸಂಭವಿಸಿದೆ.

ಕೋಟೆ ವೀಕ್ಷಿಸಲು ಬಂದಿದ್ದ ಬಸ್ಸೊಂದು ಪ್ರವಾಸ ಮುಗಿಸಿ ವಾಪಾಸು ಬರುತ್ತಿದ್ದಾಗ ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಸಮೀಪವಿರುವ ನಗರಸಭೆ ಸದಸ್ಯ ಚಂದ್ರಶೇಖರ್ ಅವರ ಮನೆ ಬಳಿ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿಯಾಗಿದೆ. ಈ ವೇಳೆ ಬಸ್ಸಿನ ಚಾಲಕ ಬಸ್ಸಿಗೆ ಬ್ರೇಕ್ ಪೇಲ್ ಆಗಿದೆ ಎಂದು ಜೋರಾಗಿ ಕೂಗಿದ್ದಾನೆ. ಟ್ರಾಕ್ಟರ್ ಮುಂದಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಟ್ರಾಕ್ಟರ್ ಚಕ್ರದಡಿಗೆ ಸಿಲುಕಿದೆ. ನಂತರ ಮುಂದಿದ್ದ ಎರಡು ಕಾರುಗಳಿಗೆ ಟ್ರಾಕ್ಟರ್ ಡಿಕ್ಕಿಯಾಗಿ ಈ ರೀತಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

 

ಇಂದು ಹೊಸ ವರ್ಷ ಆದ ಕಾರಣ ಕೋಟೆ ನೋಡಲು ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಬಂದಿದ್ದರು
ಇದೇ ವೇಳೆ ಇಂತದ್ದೊಂದು ಅಪಘಾತ ಸಂಭವಿಸಿದ್ದು ಬಾರಿ ದುರಂತವೊಂದು ತಪ್ಪಿದಂತಾಗಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಂಚಾರ ಮತ್ತು ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment