ಸುದ್ದಿಒನ್, ಚಿತ್ರದುರ್ಗ, ಜನವರಿ. 02 : ಶಾಲಾ ಬಸ್ ಪಲ್ಟಿಯಾಗಿ ಸುಮಾರು 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಲ್ಲಪ್ಪನಹಳ್ಳಿ ನಡೆದಿದೆ.
ಇಂದು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










