Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಟ್ಟದಲ್ಲಿ ಜನವರಿ 4 ಮತ್ತು 5 ರಂದು ಶ್ರೀ ದುರ್ಗಾದೇವಿ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ಗೋಪುರ ಕಳಸಾರೋಹಣ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 02 :  ತಾಲ್ಲೂಕಿನ ಬೆಳಗಟ್ಟ ಗ್ರಾಮದ ಶ್ರೀ ದುರ್ಗಾದೇವಿ ಸೇವಾ ಸಮಿತಿಯವತಿಯಿಂದ ಗ್ರಾಮ ದೇವತೆ ಶ್ರೀ ದುರ್ಗಾದೇವಿ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ಗೋಪುರ ಕಳಸಾರೋಹಣ ಸಮಾರಂಭವು ಜ. 4 ಮತ್ತು 5 ರಂದು ನಡೆಯಲಿದೆ.

ಜನವರಿ. 04 ರಂದು ಬೆಳಿಗ್ಗೆ 8 ಗಂಟೆಗೆ ಗಂಗಾ ಪೂಜೆ, ಸಂಜೆ 6.30ರಿಂದ ದುರ್ಗಾ ಹೋಮ ಹಾಗೂ ನವಗ್ರಹ ಹೋಮ ನಂತರ ಮಹಾ ಮಂಗಳಾರತಿ ಕಾರ್ಯಕ್ರಮ ನಡೆಯಲಿದೆ.
ಜನವರಿ 5 ರಂದು ಬೆಳಿಗ್ಗೆ 7.45 ರಿಂದ 8.15ವರೆಗೆ ಸಲ್ಲುವ ಮಕರ ಲಗ್ನದಲ್ಲಿ ಕಳಸಾರೋಹನ ಕಾರ್ಯಕ್ರಮ ನಂತರ ಮಹಾಮಂಗಳಾರತಿ ನಡೆಯಲಿದೆ. ಗ್ರಾಮ ದೇವತೆ ಶ್ರೀದುರ್ಗಾದೇವಿ ದೇವಸ್ಥಾನದ ಉದ್ಘಾಟನೆಯನ್ನು ಶಾಸಕರಾದ ರಘುಮೂರ್ತಿ ನೇರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ದಾನಿಗಳಾದ ಡಿ.ಎಲ್.ಭೀಮಾರೆಡ್ಡಿ ವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ದುರ್ಗಾದೇವಿ ಸೇವಾ ಸಮಿತಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment