ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ನ ಮ್ಯಾನೇಜರ್ ರಾಜಣ್ಣ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.
ಅಪೇಕ್ಸ್ ಬ್ಯಾಂಕ್ ನಿಂದ ಸಾಲ ಪಡೆದ ಆರೋಪ್ ಮೇಲೆ ದೂರು ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಎ1 ಆರೋಪಿಯಾಗಿದ್ದಾರೆ. ಈ ಸಂಬಂಧ 420 ಕೇಸ್ ದಾಖಲಾಗಿದೆ. ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಅಪೇಕ್ಸ್ ಬ್ಯಾಂಕ್ ನಲ್ಲಿ 2013ರಿಂದ 2017 ರವರೆಗೂ 232 ಕೋಟಿ 88 ಲಕ್ಷ ರೂಪಾಯಿ ಸಾಲ ಮಂಜೂರು ಮಾಡಲಾಗಿತ್ತು. ಆದರೆ ಈ ಸಾಲವನ್ನು ಬ್ಯಾಂಕ್ ಗೆ ವಾಪಾಸ್ ಮಾಡಿಲ್ಲ. ಇದು 2023ರ ವೇಳೆಗೆ 439 ಕೋಟಿ 7 ಲಕ್ಷ ಆಗಿದೆ. ಬ್ಯಾಂಕ್ ಗೆ ಮೋಸ ಮಾಡಿದ್ದಾರೆಂದು ಆರೋಪಿಸಿ, ದೂರು ದಾಖಲು ಮಾಡಲಾಗಿದೆ.
ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೋಳಿ, ವಸಂತ್ ವಿ.ಪಾಟೀಲ್, ಶಂಕರ್ ಪವಾಡೆ ಹಾಗೂ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ನ ಇಬ್ಬರು ಪದಾಧಿಕಾರಿಗಳ ವಿರುದ್ಧ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಳಗಾವಿಯ ಗೋಕಾಕ್ನ ಶುಗರ್ ಫ್ಯಾಕ್ಟರಿಯಾದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಕಾರ್ಖಾನೆಯನ್ನು ಸ್ಥಾಪನೆ ಹಾಗೂ ವಿಸ್ತರಣೆ ನಿರ್ವಹಣೆಗಾಗಿ ಸಾಲ ಪಡೆದಿದ್ದರು.