Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಸಿದ್ದರಾಮಯ್ಯ : ಜೆಡಿಎಸ್ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ. ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ.ಅದು ಆಶೀರ್ವಾದ,ಅನುಗ್ರಹದ ದ್ಯೋತಕ.ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯ ನವರೇ? ಎಂದು ಪ್ರಶ್ನಿಸಿದೆ.

 

ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ. ಮಾನ್ಯ ದೇವೇಗೌಡ ಅವರು ಸಾಮಾಜಿಕನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ… ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು.

 

ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ. ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ. ಜನಾದೇಶವನ್ನು ದೇವೇಗೌಡರು ಎಂದೂ ಧಿಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲಾ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ದಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ ಎಂದು ಸರಣಿ ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

  ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ

ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 13 :  ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ

ಮೇ 26 ರಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಸಮಾರಂಭ

ಚಿತ್ರದುರ್ಗ ಮೇ. 13 : ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇ. 85ಕ್ಕೂ

error: Content is protected !!