Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಭೀಕರ ಕೊಲೆ :  ಪತ್ನಿ ಕತ್ತು ಕೊಯ್ದು ಪತಿ ಪರಾರಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜ.12. : ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಹೆಂಡತಿಯ ಕತ್ತು ಕೊಯ್ದು ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ನಗರದ ನೆಹರು ನಗರ ಬಡಾವಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ರೇಣುಕಾ(40) ಮೃತ ದುರ್ದೈವಿಯಾಗಿದ್ದು, ಅವರ ಪತಿ ಕೊಲೆ ಮಾಡಿರುವ ಆರೋಪಿ ಮಂಜುನಾಥ್ ತಲೆ ಮರೆಸಿಕೊಂಡಿದ್ದಾನೆ. ಪತ್ನಿಯ ಶೀಲ ಶಂಕಿಸಿ ಪತಿ ಮಂಜುನಾಥ ಮನೆಯಲ್ಲಿ ಪದೇಪದೇ ಗಲಾಟೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಗುರುವಾರ ಕೊಲೆ ಮಾಡಿ ಮನೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ.

ರೇಣುಕಾ ಅವರ ತಾಯಿ ಪದೇಪದೇ ಫೋನ್ ಮಾಡಿದರೂ ಸ್ವೀಕರಿಸಿರಲಿಲ್ಲ. ಅದ್ದರಿಂದ ಅನುಮಾನ ಬಂದ ತಾಯಿ ಮನೆ ಬಾಗಿಲು ತೆಗೆದು ನೋಡಿದಾಗ ಪುತ್ರಿ ರೇಣುಕಾ ರಕ್ತದ ಮರಡುವಿನಲ್ಲಿ ಬಿದ್ದದ್ದನ್ನು ಕಂಡು ಗಾಬರಿಯಾಗಿ ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದು, ಆರೋಪಿ ಮಂಜುನಾಥ್ ಗಾಗಿ ಹುಡುಕಾಟ ನಡೆಸಿದ್ದಾರೆ. ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...