Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ : ಬ್ರಹ್ಮಪುರ(ದಗ್ಗೆ)ಯಲ್ಲಿ ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.13 : ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಮರ್ಯಾದ ಪುರುಷ ಶ್ರೀರಾಮನ ಜನ್ಮಸ್ಥಳದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೊಳಲ್ಕೆರೆ ತಾಲ್ಲೂಕು ಬ್ರಹ್ಮಪುರ(ದಗ್ಗೆ) ಯಲ್ಲಿ ಮನೆ ಮನೆಗೆ ಮಂತ್ರಾಕ್ಷತೆಯನ್ನು ವಿತರಿಸಿ ಜ.22 ರಂದು ಉತ್ತರ ದಿಕ್ಕಿನಲ್ಲಿ ಐದು ದೀಪಗಳನ್ನು ಹಚ್ಚಿ ಶ್ರೀರಾಮನನ್ನು ಪೂಜಿಸುವಂತೆ ಮನವಿ ಮಾಡಲಾಯಿತು.

ಬ್ರಹ್ಮಪುರದಲ್ಲಿರುವ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಮೊದಲು ಪೂಜೆ ಸಲ್ಲಿಸಿದ ನಂತರ ಪ್ರತಿ ಮನೆಗೆ ಮಂತ್ರಾಕ್ಷತೆಯನ್ನು ವಿತರಿಸಲಾಯಿತು.

ಹಿಂದೂಗಳ ಆರಾಧ್ಯ ದೈವ ರಾಮ ಮಂದಿರ ನಿರ್ಮಾಣಕ್ಕಾಗಿ ಈ ಹಿಂದೆ ಅಯೋಧ್ಯೆಯಲ್ಲಿ ಕರ ಸೇವೆ ಸಲ್ಲಿಸಿದವರನ್ನು ಈ ಶುಭ ಸಂದರ್ಭದಲ್ಲಿ ಕಡ್ಢಾಯವಾಗಿ ಎಲ್ಲರೂ ಸ್ಮರಿಸಲೇಬೇಕು. ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಆಗದಿದ್ದರೂ ಮನೆ ಮನೆಗೆ ತೆರಳಿ ಕರಪತ್ರ ಹಂಚುವ ಸೌಭಾಗ್ಯ ಸಿಕ್ಕಿರುವುದು ನಮ್ಮೆಲ್ಲರ ಪುಣ್ಯ. ಹಾಗಾಗಿ ಪ್ರಾಣ ಪ್ರತಿಷ್ಠಾಪನೆಯಂದು ಎಲ್ಲರೂ ಶ್ರೀರಾಮನನ್ನು ಜಪಿಸುವ ಮೂಲಕ ಭಕ್ತಿ ಸಮರ್ಪಿಸಬೇಕೆಂದು ಬಿಜೆಪಿ. ಜಿಲ್ಲಾ ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್ ಗ್ರಾಮಸ್ಥರಲ್ಲಿ ವಿನಂತಿಸಿದರು.

ಜ.22 ರಂದು ಪ್ರತಿ ಮಂಡಲಗಳ ಆಯಾ ದೇವಸ್ಥಾನಗಳಲ್ಲಿ ಸ್ವಚ್ಚತೆ ಕೈಗೊಳ್ಳುವ ಮೂಲಕ ಪ್ರಧಾನಿ ಮೋದಿರವರ ಕನಸಿಗೆ ಕೈಜೋಡಿಸುವಂತೆ ಮನವಿ ಮಾಡಿದ ದಗ್ಗೆಶಿವಪ್ರಕಾಶ್ ಇದೊಂದು ಅಭೂತಪೂರ್ವ ಸಂದರ್ಭವಾಗಿರುವುದರಿಂದ ಎಲ್ಲರೂ ಪ್ರಾಣ ಪ್ರತಿಷ್ಠಾಪನೆಯಂದು ದೀಪಗಳನ್ನು ಬೆಳಗಿ ಗೌರವಿಸಬೇಕೆಂದರು.

ಪ್ರಧಾನಿ ನರೇಂದ್ರಮೋದಿಯಂತಹ ಭಕ್ತನನ್ನು ಸ್ವತಃ ರಾಮನೇ ಅಯೋಧ್ಯೆಯಲ್ಲಿ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಭೂಮಿಗೆ ಕಳಿಸಿದ್ದಾನೆ. ಪ್ರತಿಯೊಬ್ಬ ಭಾರತೀಯ ಪ್ರತಿನಿಧಿಯಾಗಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆಂದು ದಗ್ಗೆಶಿವಪ್ರಕಾಶ್ ಹೇಳಿದರು.

ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ನಿವೃತ್ತ ಉಪನ್ಯಾಸಕ ಕುಬೇಂದ್ರಪ್ಪ ಹೆಚ್. ಎಂ.ಎಸ್.ಲೋಕೇಶ್ವರಪ್ಪ, ಮಿಲ್ಟ್ರಿ ನಾಗರಾಜಪ್ಪ, ಯರಗುಂಟಪ್ಪ, ಸಿ.ತಿಪ್ಪೇಸ್ವಾಮಿ, ಚೇರ್ಮನ್ ರುದ್ರಪ್ಪ, ದಗ್ಗೆ ದೇವೇಂದ್ರಪ್ಪ, ಸಿದ್ದಲಿಂಗಪ್ಪ, ಭೈರೇಶ್, ಸುಧಮ್ಮ, ತಗಡೂರು ರಾಜಮ್ಮ, ಮೀನಾಕ್ಷಮ್ಮ, ತಳವಾರ್ ರಾಜಪ್ಪ, ತಗಡು ಗೌರಮ್ಮ, ಅಮೂಲ್ಯ ಸೇರಿದಂತೆ ಇನ್ನು ಅನೇಕರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!