Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎ.ಮುರಳಿ ಪುನರಾಯ್ಕೆ: ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.15 : ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎರಡನೆ ಬಾರಿಗೆ ಮರು ನೇಮಕವಾಗಿರುವ ಎ.ಮುರಳಿರವರಿಗೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಪಕ್ಷದ ಕಚೇರಿಯಲ್ಲಿ ಶಾಲು ಹೊದಿಸಿ ಅಭಿನಂದಿಸಿದರು.

ಎ.ಮುರಳಿರವರನ್ನು ಅಭಿನಂದಿಸಿ ಮಾತನಾಡಿದ ಕೆ.ಎಸ್.ನವೀನ್ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಹಳಬರನ್ನೆ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಪುನರ್ ಆಯ್ಕೆ ಮಾಡಿದೆ.
ಕಳೆದ ಅವಧಿಯ ನಿಮ್ಮ ಸಾಧನೆ ಹಾಗೂ ಪಕ್ಷ ನಿಷ್ಠೆಯನ್ನು ಗುರುತಿಸಿ ನಾಯಕರು ನಿಮಗೆ ಎರಡನೆ ಬಾರಿಗೆ ಬಿಜೆಪಿ.ಜಿಲ್ಲಾಧ್ಯಕ್ಷರ ಹುದ್ದೆ ನೀಡಿದ್ದಾರೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿರುವುದರಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಹಾರೈಸಿದರು.

ಎರಡನೆ ಬಾರಿಗೆ ನನ್ನನ್ನು ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿರುವುದನ್ನು ಉಳಿಸಿಕೊಂಡು ಪಕ್ಷದಲ್ಲಿ ಪ್ರಾಮಾಣಿಕವಾಗಿ ಸೇವೆ ಮಾಡುವುದಾಗಿ ನುಡಿದರು.

ಮಧುಗಿರಿ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಹನುಮಂತೆಗೌಡ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್‍ಸಿದ್ದಾಪುರ, ಮಾಧುರಿ ಗಿರೀಶ್,  ನರೇಂದ್ರ ಹೊನ್ನಾಳ್, ಸಂಪತ್‍ಕುಮಾರ್, ದಗ್ಗೆಶಿವಪ್ರಕಾಶ್, ನಾಗರಾಜ್ ಬೇದ್ರೆ, ಡಿ.ಕೆ.ಜಯಣ್ಣ, ಶಿವಣ್ಣಾಚಾರ್, ನವೀನ್ ಚಾಲುಕ್ಯ, ನಂದಿ ನಾಗರಾಜ್, ಶ್ಯಾಮಲ ಶಿವಪ್ರಕಾಶ್, ಕಿರಣ್‍ಕುಮಾರ್, ವೀರೇಶ್‍ಜಾಲಿಕಟ್ಟೆ, ಪರಶುರಾಮ್, ಡಾ.ಮಂಜುನಾಥ್, ರಾಮರೆಡ್ಡಿ, ಭಾರ್ಗವಿ ದ್ರಾವಿಡ್, ಬಸಮ್ಮ, ಶಂಭು, ಯಶವಂತ್, ವಿರುಪಾಕ್ಷಿ, ಮನೋಜ್ ಈ ಸಂದರ್ಭದಲ್ಲಿ ಹಾಜರಿದ್ದು, ಎ.ಮುರಳಿರವರಿಗೆ ಶುಭ ಹಾರೈಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment