Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋಶಾಲೆ ಪ್ರಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಶಾಸಕ ಟಿ.ರಘುಮೂರ್ತಿ ಸೂಚನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ.16 : ಗೋಶಾಲೆ ಪ್ರಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿ ಶಾಸಕ ಟಿ. ರಘುಮೂರ್ತಿ ಮಾತನಾಡಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಸಬಾ, ದೊಡ್ಡ ಉಳ್ಳಾರ್ತಿ, ಪರಶುರಾಂಪುರ ಹೋಬಳಿಯ ಚೌಳೂರು, ಹಿರೇಕೆರೆ ಕಾವಲು, ತುರುವನೂರು ಹೋಬಳಿಯ ಬೆಳಗಟ್ಟ ಸೇರಿದಂತೆ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 5 ಗೋಶಾಲೆ ಪ್ರಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ದೇವರ ಎತ್ತುಗಳಿಗೆ ಮೇವು ಒದಗಿಸಲು ತಿಂಗಳಿಗೆ ರೂ.22 ಲಕ್ಷ ಅನುದಾನದ ಅವಶ್ಯಕತೆ ಇದೆ ಎಂದು ಸರ್ಕಾರದ ಗಮನಕ್ಕೆ ತಂದ ದೇವರ ಎತ್ತುಗಳ ಮೇವಿಗೆ ಸರ್ಕಾರದಿಂದ ರೂ.10 ಲಕ್ಷ ಅನುದಾನ ಮಂಜೂರಾಗಿದ್ದು, ಮೇವು ಪೂರೈಕೆ ಮಾಡಲಾಗಿದೆಯೇ ಎಂದು ಶಾಸಕ ರಘುಮೂರ್ತಿ ಪ್ರಶ್ನಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಬಾಬುರತ್ನ ಅವರು ಈಗಾಗಲೆ 02 ಲೋಡ್ ಮೇವು ದೇವರ ಎತ್ತುಗಳಿಗಾಗಿ ಪೂರೈಕೆ ಮಾಡಲಾಗಿದೆ ಎಂದರು.

ಮೇವು ಪೂರ್ಯಕೆ ಕುರಿತು ಶಾಸಕರ ಗಮನಕ್ಕೆ ತಾರದೇ ಇರುವುದಕ್ಕೆ ರಘುಮೂರ್ತಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಅಲ್ಲದೆ ತಡಮಾಡದೇ ಶೀಘ್ರವೇ ಮೇವು ಪೂರೈಕೆಗೆ ಕ್ರಮವಹಿಸಬೇಕು ಎಂದು ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಗೋಶಾಲೆಗಳ ಸಮರ್ಪಕ ನಿರ್ವಹಣೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಯನ್ನು ನಿಯುಕ್ತಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಸಲಹೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment