ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.17 : ಹೊಳಲ್ಕೆರೆ ತಾಲ್ಲೂಕು ಅಪ್ಪರಸನಹಳ್ಳಿ ಗ್ರಾಮದ ರಿ.ಸ.ನಂ. 62 ರಲ್ಲಿರುವ ಗೋಕಟ್ಟೆಯನ್ನು ಸುತ್ತಮುತ್ತಲಿನ ಗ್ರಾಮಸ್ಥರು ಒತ್ತುವರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಅಪ್ಪರಸನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಆರು ಎಕರೆ ಎಂಟು ಗುಂಟೆ ಜಮೀನನ್ನು ಅಪ್ಪರಸನಹಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮದವರು ದೌರ್ಜನ್ಯದಿಂದ ಒತ್ತುವರಿ ಮಾಡಿಕೊಂಡಿರುವುದರಿಂದ ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗಿದೆ. ಒತ್ತುವರಿಯನ್ನು ತೆರವುಗೊಳಿಸಿ ಜಾನುವಾರುಗಳಿಗೆ ಅನುಕೂಲ ಮಾಡಿಕೊಡುವಂತೆ ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಶಶಿಧರ್, ಅಪ್ಪರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಜಿ.ಪರಮೇಶ್ವರಪ್ಪ, ಗೌರಮ್ಮ, ನಾಗಮ್ಮ, ಜಿ.ಪರಮೇಶ್ವರಪ್ಪ, ಸಿ.ಎಂ.ಮಹೇಶ್ವರಪ್ಪ, ನಾಗರಾಜ ಇನ್ನು ಅನೇಕರು ಪ್ರತಿಭಟನೆಯಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










