Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹೊಸ ಹೈವೇಯಲ್ಲಿ ಅಪಘಾತ, ಇಬ್ಬರು ಸಾವು, ಮೂವರಿಗೆ ಗಾಯ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಜನವರಿ.19 : ನಗರದ ಹೊರವಲಯದ ಹೊಸ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕ್ಯಾದಿಗೆರೆ – ಸೀಬಾರ ಹೊಸ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದಕರಿಪುರದ ಬಳಿ ಇಂದು (ಶುಕ್ರವಾರ) ಬೆಳಿಗ್ಗೆ ಕಾರು ಹಾಗೂ ದೊಡ್ಡ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ಕಾರು ಮದಕರಿಪುರದ ಬಳಿ ಮುಂದೆ ಹೋಗುತ್ತಿದ್ದ ದೊಡ್ಡ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಈ ಅಪಘಾತದಲ್ಲಿ ಬೆಂಗಳೂರು ಮೂಲದ ವಿನುತಾ (40) ಮತ್ತು ನಿರ್ಮಲಾ (55) ಎಂಬುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಫಣಿರಾಜ್, ರಶ್ಮಿ, ಯಶಸ್ ಅವರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment