ರಾಜಕೀಯದಲ್ಲಿ ಧರ್ಮ ಇರಲಿ.. ಧರ್ಮದಲ್ಲಿ ರಾಜಕಾರಣ ಬೇಡ : ಡಿಸಿಎಂ ಡಿಕೆ ಶಿವಕುಮಾರ್

1 Min Read

 

ಬೆಂಗಳೂರು: ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಬೇಕೆಂದು ವಿಪಕ್ಷಗಳು ಸರ್ಕಾರಕ್ಕೆ ಮನವಿ ಮಾಡಿವೆ. ಆದರೆ ರಜೆ ಘೋಷಣೆ ಬಗ್ಗೆ ಇನ್ನು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಧರ್ಮ, ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ‌.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಕ್ತಿ, ಗೌರವ, ಧರ್ಮವನ್ನು ಪ್ರಚಾರಕ್ಕೆ ಮಾಡುವುದಲ್ಲ. ನಾವೂ ಭಕ್ತಿ, ಗೌರವ, ಧರ್ಮವನ್ನು ಪ್ರಚಾರಕ್ಕೆ ಮಾಡುವುದಿಲ್ಲ. ದೇಗುಲಗಳಲ್ಲಿ ಏನು ಆಚರಣೆ ಮಾಡಬೇಕು ಅದನ್ನು ಮಾಡುತ್ತಾರೆ. ಏನು ಪೂಜೆ ಪುನಸ್ಕಾರಗಳನ್ನು ಮಾಡಬೇಕು ಅದನ್ನು ಮಾಡುತ್ತೇವೆ. ನಮಗೆ ಈ ಬಗ್ಗೆ ಯಾರೂ, ಏನನ್ನು ಹೇಳುವ ಅವಶ್ಯಕತೆ ಇಲ್ಲ. ಪ್ರಾರ್ಥನೆಗಳಿಂದ ಫಲ ದೊರೆಯುತ್ತದೆ ಎಂಬ ನಂಬಿಕೆ ನಮಗೆ ಇದೆ. ಹಾಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಎಂದು ಹೇಳುತ್ತಿದ್ದೇವೆ.

ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮನಿದ್ದಾನೆ. ನನ್ನ ಹೆಸರಲ್ಲಿ ಶಿವನಿದ್ದಾನೆ. ನಮಗೆ ಯಾರು ಹೇಳಿಕೊಡುವ ಅವಶ್ಯಕತೆ ಇಲ್ಲ. ಈ ಸಂಬಂಧ ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಆದರೆ ಧರ್ಮದಲ್ಲಿ ರಾಜಕಾರಣ ಬೆರೆಸುವುದು ಬೇಡ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಶಾಲಾ-ಕಾಲೇಜುಗಳಿಗೆ ಸರ್ಕಾರಿ ರಜೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ನಾಯಕರ ಮನವಿ ಪತ್ರವನ್ನು ನಾನು ಇನ್ನು ನೋಡಿಲ್ಲ ನೋಡುತ್ತೇನೆ ಎಂದು ಹೇಳುವ ಮೂಲಕ ರಜೆ ಘೋಷಣೆ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಅಂದು ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ ನೀಡಿ, ರಾಮನ ಧ್ಯಾನದಲ್ಲಿ ಇಡೀ ಜನತೆ ಇರಲಿ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಬಳಿ ಮನವಿ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *