Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತ್ತ ಅಯೋಧ್ಯೆಯಲ್ಲಿ ಬಾಲ ರಾಮನಿಗೆ ಪ್ರಾಣ ಪ್ರತಿಷ್ಠಾಪನೆ, ಇತ್ತ ಚಿತ್ರದುರ್ಗದಲ್ಲಿ ಮಗುವಿಗೆ ಶ್ರೀರಾಮ ಎಂದು ನಾಮಕರಣ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಈ ಸುಂದರ ಗಳಿಗೆಯನ್ನು ಇಡೀ ದೇಶದ ಹಿಂದೂಗಳು ಭಕ್ತಿ ಭಾವದಿಂದ ಆಚರಣೆ ಮಾಡುತ್ತಿದ್ದಾರೆ. ಈ ದಿನಕ್ಕಾಗಿ ಅದೆಷ್ಟೋ ವರ್ಷಗಳಿಂದ ಕಾಯುತ್ತಿದ್ದಾರೆ. ಹೀಗಾಗಿ ಈ ವಿಶೇಷ ದಿನದಂದು ಅದೆಷ್ಟೋ ಗರ್ಭಿಣಿಯರು ಇಂದೇ ಡೆಲಿವರಿ ಮಾಡಿಸಲು ಮನವಿ ಮಾಡಿದ್ದಾರೆ. ಇದರ ಜೊತೆಗೆ ಮಕ್ಕಳಿಗೆ ನಾಮಕರಣವನ್ನು ಇಂದೇ ಮಾಡುತ್ತಿದ್ದಾರೆ. ಅದರಲ್ಲೂ ಮಕ್ಕಳಿಗೆ ಶ್ರೀ ರಾಮ ಎಂಬ ಹೆಸರನ್ನೇ ಇಡುತ್ತಿದ್ದಾರೆ.

ದೇಶದಾದ್ಯಂತ ಸಂಭ್ರಮಾಚರಣೆ ಜೋರಾಗಿದೆ. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ.
ಇತ್ತ ಚಿತ್ರದುರ್ಗದಲ್ಲೂ ವಿಶೇಷ ಕಾರ್ಯಕ್ರಮವೊಂದು ನಡೆಯಿತು.

ಅತ್ತ ಶ್ರೀ ರಾಮಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಟಾಪನೆಯ ಶುಭ ಮುಹೂರ್ತದ ಸಮಯ 12 ಗಂಟೆ 29  ನಿಮಿಷ 8 ಸೆಕೆಂಡುಗಳಿಂದ 12 ಗಂಟೆ 30 ನಿಮಿಷ 32 ಸೆಕೆಂಡುಗಳ ವರೆಗೂ ಇರುವ 84 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನೆರವೇರಿದ ಇದೇ ಶುಭ ಮುಹೂರ್ತದಲ್ಲಿ ಶ್ರೀಮತಿ ಭಾವನ ಮತ್ತು ಸಾಗರ್ ದಂಪತಿಗಳು ತಮ್ಮ ಮಗುವಿಗೆ ಶ್ರೀ ರಾಮ್ ಎಂದು ನಾಮಕರಣ ಮಾಡಿದರು.

ನಗರದ ಸಾಗರ್  ಅವರಿಗೆ ಭಾವನಾ ಎಂಬುವರೊಂದಿಗೆ ಮದುವೆಯಾಗಿದೆ. ಮದುವೆಯ ನಂತರ ಭಾವನಾ ಅವರು 2023, ಸೆಪ್ಟೆಂಬರ್ 22ರಂದು ಗುಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಂದಿಗೆ ಮಗುವಿಗೆ 5 ತಿಂಗಳು ತುಂಬಿದ್ದು, ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮಗುವಿಗೆ “ಶ್ರೀರಾಮ್” ಎಂದು ನಾಮಕರಣ ಮಾಡಿದ್ದಾರೆ. ತಂದೆ ಸಾಗರ್ ಮೆಡಿಕಲ್ ರೆಪ್ರೆಸೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪತ್ನಿ ಭಾವನಾ ಗೃಹಿಣಿಯಾಗಿದ್ದಾರೆ ಎನ್ನಲಾಗಿದೆ. ಇವರಿಬ್ಬರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಟಾಪನೆ ಮಳಿಗೆಯಲ್ಲಿಯೇ ಮಗುವಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಮಾಡಿದರು.

ಇನ್ನು ಈ ಬಗ್ಗೆ ಮಾತನಾಡಿದ ಮಗುವಿನ ತಾಯಿ ಭಾವನ
ಸುದ್ದಿಒನ್ ನೊಂದಿಗೆ ಸಂಭ್ರಮ ಹಂಚಿಕೊಂಡರು.
ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಂದು ಒಳ್ಳೆಯ ದಿನವಾಗಿರುವುದರಿಂದ ಕುಟುಂಬದ ಸದಸ್ಯರು ತಿರ್ಮಾನ ಮಾಡಲಾಯಿತು. ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಜರುಗಿದ ಸಮಯದಲ್ಲಿ ಮಗನಿಗೆ ಶ್ರೀರಾಮ್ ಎಂದು ನಾಮಕರಣ ಮಾಡಲಾಯಿತು. ಮನೆಯಲ್ಲಿ ಸತ್ಯನಾರಾಯಣ ಪೂಜೆ ಸಲ್ಲಿಸಿ ನಾಮಕರಣ ಮಾಡಲಾಯಿತು. ಇದರಿಂದ ಮನೆಯಲ್ಲಿ ಎಲ್ಲರೂ ಖುಷಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು”.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment