ಸುದ್ದಿಒನ್, ಚಿತ್ರದುರ್ಗ, ಜನವರಿ.22 : ತಾಲ್ಲೂಕಿನ ಭೀಮಸಮುದ್ರ – ಬೊಮ್ಮೇನಹಳ್ಳಿಯ ಲೆಕ್ಕ ಪರಿಶೋಧಕ ಡಿ.ಆರ್. ವೆಂಕಟೇಶ್ ಇಂದು (ಸೋಮವಾರ) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಮಂಗಳವಾರ) ಮಧ್ಯಾನ್ಹ ಸ್ವಗ್ರಾಮವಾದ ಬೊಮ್ಮೇನಹಳ್ಳಿಯ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮತ್ತು ರೋಟರಿ ಕ್ಲಬ್ ನಲ್ಲಿ ರೊಟೇರಿಯನ್ ಆಗಿಯೂ ಸೇವೆ ಸಲ್ಲಿಸಿದ್ದರು.

ಸಂತಾಪ : ಚಿತ್ರದುರ್ಗ ರೋಟರಿ ಕ್ಲಬ್ ನ ಸದಸ್ಯರು ಹಾಗೂ ಲೆಕ್ಕ ಪರಿಶೋಧಕರ ಸಂಘದ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















