Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಸಿಎಂಗೆ ಪತ್ರ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಜನವರಿ.23 : ಮಧ್ಯ ಕರ್ನಾಟಕ ಬಹು ನಿರೀಕ್ಷಿತ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದಾಸೀನ ಮನೋಭಾವದಿಂದಾಗಿ ನೆನೆಗುದಿಗೆ ಬಿದ್ದಿದ್ದು  ಅನ್ನದಾತರು ತೀವ್ರ ಆಕ್ರೋಶಗೊಂಡಿದ್ದಾರೆ ಇದನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯವರು
ಪತ್ರ ಬರೆದು ಮನವಿ ಸಲ್ಲಿಸಿದರು.

ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು (ಮಂಗಳವಾರ) ಚಿತ್ರದುರ್ಗ ಬಂದ್ ಕರೆ ನೀಡಲಾಗಿತ್ತು. ಸುಮಾರು 20 ಕ್ಕೂ ಹೆಚ್ಚು ಸಂಘಟನೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಹುತೇಕ ಯಶಸ್ವಿಯಾಗಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದ್ ಗೆ ಬೆಂಬಲ ಸೂಚಿಸಿದರು.

ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಿತಿಯ ಕಾರ್ಯಾಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಹಲವಾರು ರೈತ ಮುಖಂಡರು, ಹಲವು ಸಂಘಟನೆಗಳ ಮುಖಂಡರು, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಆರಂಭವಾಗಿ 23 ವರ್ಷ ಕಳೆದಿದ್ದರೂ ಯೋಜನೆ ಆಮೆ ವೇಗದಲ್ಲಿ ಸಾಗುತ್ತಿರುವುದು ರೈತಾಪಿ ಸಮುದಾಯದಲ್ಲಿ ಕಳವಳ ಮೂಡಿಸಿದೆ.  ಅಂದುಕೊಂಡಂತೆ ಕಾಮಗಾರಿ ಕಾಲಮಿತಿಯೊಳಗೆ ಮುಗಿದಿದ್ದರೆ  ಇಷ್ಟೊತ್ತಿಗೆ ಈ ನೆಲ ಹಸಿರಾಗಿ ಕಂಗೊಳಿಸುತ್ತಿತ್ತು. ಜಿಲ್ಲೆಗೆ ಇಂತಹ ದುರ್ಗತಿ  ಬರುತ್ತಿರಲಿಲ್ಲ. ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡನೀಯ. ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯ ಅಪಾರ ಪ್ರಮಾಣದಲ್ಲಿದೆ ಎಂದಿದ್ದಾರೆ.

ಮಧ್ಯ ಕರ್ನಾಟಕದ ನಾಲ್ಕು ಜಿಲ್ಲೆಗಳ ಕೆರೆ ತುಂಬಿಸುವ ಹಾಗೂ ಹನಿ ನೀರಾವರಿಯೋಜನೆಗೆ ಆರಂಭದಲ್ಲಿ ಆರು ಸಾವಿರ ಕೋಟಿ ರುಪಾಯಿ ವೆಚ್ಚ ಅಂದಾಜಿಸಲಾಗಿತ್ತು. ಸರ್ಕಾರದ ಇಚ್ಚಾಶಕ್ತಿ ಕೊರತೆ ಹಾಗೂ ವಿಳಂಬ ಧೋರಣೆಯಿಂದಾಗಿ ಅದೀಗ 22 ಸಾವಿರ  ಕೋಟಿ ರುಪಾಯಿ ಪರಿಷ್ಕೃತ ಮೊತ್ತಕ್ಕೆ ಸೀಮಿತವಾಗಿದೆ.  ತರಿಕೆರೆ ತಾಲೂಕಿನ ಅಬ್ಬಿನಹೊಳಲು ಬಳಿ ಕೇವಲ 1.6 ಕಿಮೀ ಉದ್ದದ ಕಾಲುವೆ ನಿರ್ಮಾಣಕ್ಕೆ ಅಲ್ಲಿನ ಕೆಲ ರೈತರು ಅಡ್ಡಿ ಪಡಿಸುತ್ತಿದ್ದಾರೆ. ಕಳೆದ  ಎಂಟು ವರ್ಷಗಳಿಂದ ಇದು ಸಮಸ್ಯೆಯಾಗಿ ಉಳಿದಿದೆ. ಓರ್ವ ಜನಪ್ರತಿನಿಧಿಯ  ಹಠದ ಮುಂದೆ  ಇಡೀ ಸರ್ಕಾರವೇ ಮಂಡಿಯೂರಿದೆ. ಇದೊಂದು ಸಮಸ್ಯೆಯಿಂದಾಗಿ ಯೋಜನಾ ವೆಚ್ಚ ಹೆಚ್ಚಳವಾಗುತ್ತಲೇ ಹೋಗುತ್ತಿದ್ದು ಸರ್ಕಾರಕ್ಕೆ ಈ ಸಂಗತಿ ಅರಿವಾಗದೇ ಇರುವುದು ಶೋಚನೀಯವಾಗಿದೆ.

ಭದ್ರಾ ಮೇಲ್ದಂಡೆ ಹಳೇ ಕಾಮಗಾರಿಗಳಿಗೆ ಗುತ್ತಿಗೆದಾರರಿಗೆ ಸರಿ ಸುಮಾರು ಮೂರು ಸಾವಿರ ಕೋಟಿ ರುಪಾಯಿಷ್ಟು ಬಾಕಿ ಕೊಡಬೇಕಾಗಿದೆ. ಈ ಮೊತ್ತ ಪಾವತಿಸದ ಹೊರತು ಗುತ್ತಿಗೆದಾರರು ಕಾಲಮಿತಿಯೊಳಗೆ ಕಾಮಗಾರಿ ಮುಗಿಸುವುದು ಕಷ್ಟ. ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾ ಮೇಲ್ದಂಡೆಗೆ 2700 ಕೋಟಿ ರುಪಾಯಿ ಅನುದಾನವ  ಈ ವರ್ಷ ಒದಗಿಸುವುದಾಗಿ ಹೇಳಿ ಕೇವಲ 1200 ಕೋಟಿ ನೀಡಿದ್ದಾರೆ. ಇನ್ನೂ 1500 ಕೋಟಿ ರು ಪ್ರಸ್ತಾಪವಿಲ್ಲ. ಮತ್ತೊಂದು ಬಜೆಟ್ ಎದುರಾಗಿದೆ.

ಭದ್ರಾ ಮೇಲ್ದಂಡೆಯ  ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಕೇಂದ್ರದಿಂದ ಅನುದಾನ ಪಡೆಯುವ ಪ್ರಸ್ತಾಪಗಳು ಕಳೆದ ಹತ್ತು ವರ್ಷಗಳಿಂದಲೂ ಭಾರತ ಸರ್ಕಾರದ ಮುಂದಿದೆ. ಈ ಹಿಂದೆ ಯಡಿಯೂರಪ್ಪಅವರ ಸರ್ಕಾರ ಇದ್ದಾಗಲೇ ರಾಷ್ಟ್ರೀಯ ಯೋಜನೆ ಕಡತಗಳು ರಾಜ್ಯದಿಂದ ಕೇಂದ್ರ ಜಲಶಕ್ತಿ ಕಚೇರಿಗೆ ಮಂಡನೆಯಾಗಿದ್ದವು.  ಕಳೆದ ವಿಧಾನಸಭೆ ಚುನಾವಣೆ ವೇಳೆ ಚಿತ್ರದುರ್ಗಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರಾ ಮೇಲ್ದಂಡೆಯ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ 5300 ಕೋಟಿ ರುಪಾಯಿ ಅನುದಾನ ಒದಗಿಸುವುದಾಗಿ  ಹೇಳಿದ್ದರು.

ಭದ್ರಾ ಮೇಲ್ಡಂಡೆಯನ್ನು  ರಾಷ್ಟ್ರೀಯ ಯೋಜನೆ ಎಂದು ಶಿಫಾರಸು ಮಾಡಿ  ಸುಮಾರು 5300 ಕೋಟಿ ರುಪಾಯಿ ಅನುದಾನವ ಕಳೆದ ಬಜೆಟ್ ನಲ್ಲಿ ಮೀಸಲಿರಿಸಿದ್ದು ಇದುವರೆಗೂ ಬಿಡುಗಡೆ ಮಾಡಿಲ್ಲ. ನಂತರ ನಡೆದ ವಿದ್ಯಮಾನಗಳಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಭದ್ರಾ ಮೇಲ್ದಂಡೆಯ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲು ಸಾಧ್ಯವಿಲ್ಲ. ಬದಲಿ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ಪರಿಗಣಿಸುತ್ತದೆ ಎಂಬ ಜಲಶಕ್ತಿ ಸಚಿವಾಲಯದ ನಿರ್ದೇಶನವನ್ನು ರಾಜ್ಯ ಸರ್ಕಾರ ಪಾಲಿಸಿದೆ. ಪ್ರಧಾನ ಮಂತ್ರಿ ಕೃಷಿ ಸಂಚಾಯಿನಿ ಯೋಜನೆ ಆಗ್ಜಿಲರೇಟೆಡ್  ಇರಿಗೇಷನ್ ಬೆನಿಪಿಟ್  ಪ್ರೋಗ್ರಾಮ್ (PMKSY-AIBP) ಅಡಿ ಅನುದಾನ ಒದಗಿಸುವ ಪ್ರಸ್ತಾವನೆಯನ್ನು ಕೇಂದ್ರದ ಮುಂದೆ ಮಂಡಿಸಲಾಗಿದೆ. ಆರು ತಿಂಗಳಾದರೂ ಕೇಂದ್ರ ಮನ್ನಣೆ ನೀಡಿ ಅನುದಾನ ನೀಡುತ್ತಿಲ್ಲ. ಕೇಂದ್ರದ ಮೇಲೆ ರಾಜ್ಯ ಹಾಗೂ ರಾಜ್ಯದ ಮೇಲೆ ಕೇಂದ್ರ ಸರ್ಕಾರ ಆರೋಪಿಸುತ್ತ ಕಾಲ ಹರಣ ಮಾಡುತ್ತಿದೆ. ಇವರಿಬ್ಬರ ನಡುವೆ ಭದ್ರಾ ಮೇಲ್ದಂಡೆ ಸೊರಗಿದೆ. ಜನಕಲ್ಯಾಣ ಮರೆತು ವರ್ತಿಸು್ತ್ತಿರುವ  ಸರ್ಕಾರಗಳ ಈ  ನಡೆಯನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಉಗ್ರವಾಗಿ ಖಂಡಿಸುತ್ತದೆ.

ಪತ್ರದಲ್ಲಿ ಕೆಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗಿದೆ.
1). ಭದ್ರಾ ಮೇಲ್ದಂಡೆ ಕಾಮಗಾರಿಗೆ ತೊಡಕಾಗಿರುವ  ಭೂ ಸ್ವಾಧೀನ ಪ್ರಕ್ರಿಯೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. 2). ಚಳ್ಳಕೆರೆ, ಮೊಳಕಾಲ್ಮುರು, ಜಗಳೂರು ಪ್ರದೇಶದ ಕಾಮಗಾರಿಗಳ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು
3) ಹೊಳಲ್ಕೆರೆ ತಾಲೂಕಿನ ಕೆರೆಗಳ ತುಂಬಿಸಲು ಮುಂಬರುವ ಮಳೆಗಾಲದಲ್ಲಿಯೇ ಅಗತ್ಯ ಕ್ರಮ ಕೈಗೊಳ್ಳಬೇಕು.
4) ಟೆಂಡರ್ ಕರೆದು ಹನಿ ನೀರಾವರಿ ಕಾಮಗಾರಿಗಳ ಆರಂಭಿಸಬೇಕು.
5). ಮುಂದಿನ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಜಲ ಸಂಪನ್ಮೂಲ ಇಲಾಖೆಗೆ ನಿಗಧಿಗೊಳಿಸಲಾದ ಅನುದಾನದಲ್ಲಿ ಸಿಂಹಪಾಲು  ಭದ್ರಾ ಮೇಲ್ದಂಡೆಗೆ ವಿನಿಯೋಗಿಸಬೇಕು ಎಂದು ಪತ್ರದ ಮೂಲಕ ರೈತ ಸಂಘಟನೆಗಳು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

ನವೆಂಬರ್ 26 ರಿಂದ 28 ರವರೆಗೆ ಭ್ರಷ್ಟಾಚಾರ ತಡೆಯಲು ಉಪವಾಸ ಸತ್ಯಾಗ್ರಹ : ಎಎಪಿ ಜಗದೀಶ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಇತ್ತೀಚಿನ ದಿನಮಾನದಲ್ಲಿ ಎಲ್ಲಡೆ ಭ್ರಷ್ಠಾಚಾರ ತುಂಬಿ ತುಳುಕಾಡುತ್ತಿದೆ, ಇದನ್ನು ತಡೆಯುವ ಸಲುವಾಗಿ ಭ್ರಷ್ಠಾಚಾರ

ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದ್ಯಾ..? ಹಾಗಾದ್ರೆ ಸರಿಯಾಗಲು ಹೀಗೆ ಮಾಡಿ

ಬೆಂಗಳೂರು: ನಕಲಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡ್ತೀವಿ ಎಂದು ಸರ್ಕಾರ ಹೇಳಿತ್ತು. ಆದ್ರೆ ಅನರ್ಹರ ಜೊತೆಗೆ ಅರ್ಹರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಇದರಿಂದ ಸಾಕಷ್ಟು ಜನ ನಿಂದಿದ್ದಾರೆ. ಅರ್ಹರ ಬಿಪಿಎಲ್ ಕಾರ್ಡ್

error: Content is protected !!