Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 28 ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಅಲೇಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ : ಪ್ರತಾಪ್ ಜೋಗಿ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜ.24 :  ರಾಜ್ಯ ಅಲೇಮಾರಿ ಮತ್ತು ಅರೆ ಅಲೆಮಾರಿ ಜನಾಂಗದವತಿಯಿಂದ ಇದೇ ಜ.28 ರಂದು ಮೈಸೂರಿನ ಪುರಭವನದಲ್ಲಿ ರಾಜ್ಯ ಮಟ್ಟದ ಅಲೇಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಜೋಗಿ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೆಗೌಡ ಉದ್ಘಾಟನೆ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರದ ಟಿ.ಎ.ಶರವಣ, ಅರುಣ್ ಡಿ.ಎಸ್., ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ ಸೇರಿದಂತೆ ಇತರರು ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಅಲೇಮಾರಿ ಮತ್ತು ಅರೆ ಅಲೆಮಾರಿ ಜನಾಂಗದ 46 ಜಾತಿಗಳ ಜಾನಂಗದವರು ಭಾಗವಹಿಸಲಿದ್ದು, ಈ ಜಾತಿಗಳ ಕುಲಶಾಸ್ತ್ರ ಅಧ್ಯಯನ ಮತ್ತು ಪ್ರತ್ಯೇಕ ಮೀಸಲಾತಿ ನೀಡಬೇಕು. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಇರುವ ಅಲೇಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮೀಕ್ಷೆ ಆಗಬೇಕು. ಸರ್ಕಾರಿ ಜಾಗದಲ್ಲಿ 10 ವರ್ಷ ಮೇಲ್ಪಟ್ಟು ಡೇರೆ, ಗುಡಿಸಲು, ಟೆಂಟ್ ಹಾಕಿ ಜೀವನ ನಡೆಸುತ್ತಿರುವವರಿಗೆ ಅದೇ ಜಾಗವನ್ನು ಅವರ ಹೆಸರಿಗೆ ನೀಡಬೇಕು ಹಾಗೂ ನಮ್ಮ ಜನಾಂಗದ ಕುಲಕಸುಬನ್ನು ಮಾಡುತ್ತಿರುವವರಿಗೆ ಸರಿಯಾದ ಸಾಲ ಸೌಲಭ್ಯ ಕಲ್ಪಿಸಬೇಕು. ಜನಾಂಗದ ಕಷ್ಟಗಳಿಗೆ ಸರ್ಕಾರ ಸ್ಪಂದನೆ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದರು.

ಕಾಲೋತ್ಸವದಲ್ಲಿ ಹಿಂದುಳಿದ ಮಠಾಧೀಶರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಬಸವನಾಗ್ತಿ ದೇವ ಶ್ರೀಗಳನ್ನು ಗೌರವಿಸಲಾಗುವುದು, ಇದರೊಂದಿಗೆ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, ವಿಚಾರ ಸಂಕೀರಣ, ಜನಾಂಗ ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಣಯವನ್ನು ಕೈಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದ ಅವರು, ಸಾಧಕರ ಸನ್ಮಾನದಲ್ಲಿ ಚಿತ್ರದುರ್ಗದಿಂದ ಸಂಘದ ಗೌರವಾಧ್ಯಕ್ಷರಾದ ರಾಮುಗೋಸಾಯಿಯವರನ್ನು ಗೌರವಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ರಾಮು ಗೋಸಾಯಿ, ಕಾರ್ಯದರ್ಶಿ ಇಂದಿರಾ ದಾಸರ್, ಜ್ಯೋತಿ ದಾಸರ್ ಚಿಕ್ಕಣ್ಣ ಯಾದವ್, ಮಧು ಜೋಗಿ, ಚಂದು ಯಾದವ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!