ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜನವರಿ. 25 : ಮಾತು ಬಾರದ ಮೂಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಆರೋಪದಡಿ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಹೊಳಲ್ಕೆರೆ ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದ ಎನ್.ಓ. ನಾಗೇಶ್ ಶಿಕ್ಷೆಗೊಳಗಾದವನು. ದಿನಾಂಕ 16-09-2021 ರಂದು ರಾತ್ರಿ 9-30 ಗಂಟೆ ಸಮಯದಲ್ಲಿ ತುಪ್ಪದಹಳ್ಳಿ ಮತ್ತು ತುಪ್ಪದಹಳ್ಳಿ ಲಂಬಾಣಿ ಹಟ್ಟಿ ಗ್ರಾಮಗಳ ಮಧ್ಯೆ ಅಡಿಕೆ ತೋಟದ ಬಳಿ ಮಾತು ಬಾರದ ಮೂಕ ಮಹಿಳೆಯ ಅತ್ಯಾಚಾರ ಮಾಡಿ ಪ್ರಾಣ ತೆಗೆಯಲು ಪ್ರಯತ್ನಪಟ್ಟಿರುತ್ತಾನೆ.
ಈ ಸಂಬಂಧ ಅರೋಪಿ ಎನ್.ಓ. ನಾಗೇಶ್ ಇವರ ವಿರುದ್ಧ ಹೊಳಲ್ಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಪ್ರಥಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ. ಗೀತಾ ಇವರು ಆರೋಪಿಗೆ 12 ವರ್ಷ ಕಠಿಣ ಶಿಕ್ಷೆ ಮತ್ತು ರೂ.1,00,000/- ದಂಡ ವಿಧಿಸಿ ಜನವರಿ 25 ರಂದು ( ದಿ:25-1-2024) ತೀರ್ಪನ್ನು ನೀಡಿರುತ್ತಾರೆ.
ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರಾದ ಬಿ.ಗಣೇಶ ನಾಯ್ಕ ಇವರು ವಿಚಾರಣೆಯನ್ನು ನಡೆಸಿ ವಾದ ಮಂಡಿಸಿರುತ್ತಾರೆ.
ಶ್ರೀ ಬಿ.ಗಣೇಶ ನಾಯ್ಕ
ಪ್ರಧಾನ ಸರ್ಕಾರಿ ಅಭಿಯೋಜಕರು, ಚಿತ್ರದುರ್ಗ.
ಫೋನ್ ನಂಬರ್
ಮೊ : 9972977047

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್