Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನವರಿ 28 ರಂದು ಶೋಷಿತ ಸಮುದಾಯಗಳ ಬೃಹತ್ ಸಮಾವೇಶ : ಇಂದು ಜೆ.ಜೆ.ಹಟ್ಟಿ ಡಾ.ಬಿ.ತಿಪ್ಪೇಸ್ವಾಮಿ ನೇತೃತ್ವದಲ್ಲಿ ನಡೆದ ಬೈಕ್ ರ್ಯಲಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.25  : ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ವಿಶಾಲವಾದ ಮೈದಾನದಲ್ಲಿ ಇದೇ ತಿಂಗಳ 28 ರಂದು ನಡೆಯಲಿರುವ ಶೋಷಿತ ಸಮುದಾಯಗಳ ಬೃಹತ್ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶೋಷಿತರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಆಗಮಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಕಾಂಗ್ರೆಸ್ ಯುವ ಮುಖಂಡ ಜೆ.ಜೆ.ಹಟ್ಟಿ ಡಾ.ಬಿ.ತಿಪ್ಪೇಸ್ವಾಮಿ ಮುಂದಾಳತ್ವದಲ್ಲಿ ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಿಂದ ಬೈಕ್ ರ್ಯಾಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬೈಕ್‍ರ್ಯಾಲಿಗೆ ಚಾಲನೆ ನೀಡಿ ದ್ವಿಚಕ್ರ ವಾಹನದಲ್ಲಿ ಸುತ್ತಾಡಿ ಶೋಷಿತ ಸಮುದಾಯದವರಲ್ಲಿ ಜಾಗೃತಿ ಮೂಡಿಸಿದರು.

ಕಾನೂನು ಕಾಲೇಜು ಮುಂಭಾಗದ ರಸ್ತೆಯಿಂದ ಜೋಗಿಮಟ್ಟಿ ರೋಡ್, ಆನೆಬಾಗಿಲು, ಬುರುಜನಹಟ್ಟಿ, ಕನಕ ವೃತ್ತ, ಗಾಂಧಿ ಸರ್ಕಲ್, ಹೊರಪೇಟೆ, ಜೆ.ಸಿ.ಆರ್. ಕವಾಡಿಗರಹಟ್ಟಿ, ಮುರುಘಾಮಠದ ಕಡೆ ಸಂಚರಿಸಿ ಅಂತಿಮವಾಗಿ ಒನಕೆ ಓಬವ್ವ ವೃತ್ತದಲ್ಲಿ ಬೈಕ್ ರ್ಯಾಲಿ ಮುಕ್ತಾಯಗೊಂಡಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ನಜ್ಮತಾಜ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಬಿ.ಟಿ.ಜಗದೀಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ಯು.ಲಕ್ಷ್ಮಿಕಾಂತ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ಬಿ.ರಾಜಣ್ಣ, ಕರ್ನಾಟಕ ರಾಜ್ಯ ಮುಸ್ಲಿಂ ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಎಂ.ಹನೀಫ್ ಇನ್ನು ಮೊದಲಾಧವರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment