ಕೊಳಗೇರಿ ನಿವಾಸಿಗಳಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ ಸಂಘಟನೆ ಧರಣಿ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ಸ್ಲಂ ಜನಾಂದೋಲನ ಸಂಘಟನೆಯ ಕೊಳಗೇರಿ ನಿವಾಸಿಗಳನ್ನು ಗುರುತಿಸಿ ಖಾಲಿ ನಿವೇಶನ ನೀಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸ್ಲಂ ಜನಾಂದೋಲನ-ಕರ್ನಾಟಕ ಜಿಲ್ಲಾ ಶಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಎರಡು ದಿನಗಳಿಂದ ಧರಣಿ ನಡೆಸಲಾಗುತ್ತಿದೆ.

ಚಿತ್ರದುರ್ಗ ನಗರ ವ್ಯಾಪ್ತಿಯ ನಾಲ್ಕು ನೂರು ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರ ಭೂಮಿ ಗುರುತಿಸಿ ಮಂಜೂರು ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಜನಾಂಗ, ಹಿಂದುಳಿದ ಅಲ್ಪಸಂಖ್ಯಾತ ಸಮುದಾಯಗಳೆ ಕೊಳಗೇರಿಗಳಲ್ಲಿ ಹೆಚ್ಚು ವಾಸಿಸುತ್ತಿದ್ದು, ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿದ್ದಾರೆ. ನಗರಸಭೆ ಬಜೆಟ್‍ನಲ್ಲಿ ವಿಶೇಷ ಅನುದಾನ ಕಾಯ್ದಿರಿಸಿ ಕೂಡಲೆ ವಸತಿ ವ್ಯವಸ್ಥೆ ಕಲ್ಪಿಸಬೇಕೆಂದು ಧರಣಿನಿರತರು ಒತ್ತಾಯಿಸಿದರು.

ಸ್ಲಂ ಜನಾಂದೋಲನ-ಕರ್ನಾಟಕ ಜಿಲ್ಲಾ ಶಾಖೆ ಜಿಲ್ಲಾಧ್ಯಕ್ಷ ಮಂಜಣ್ಣ ಟಿ. ರಾಜ್ಯ ಸಮಿತಿ ಸದಸ್ಯ ಕೆ.ರಾಜಣ್ಣ, ಡಿ.ಎಸ್.ಎಸ್.ರಾಜ್ಯಾಧ್ಯಕ್ಷ ಮಹಾಲಿಂಗಪ್ಪ ಕುಂಚಿಗನಹಾಳ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್, ಜಿಲ್ಲಾಧ್ಯಕ್ಷ ಎಂ.ಮಹೇಶ್, ಉಪಾಧ್ಯಕ್ಷೆ ಮಾಲತಿ, ಜಗದೀಶ್, ಭಾಗ್ಯಮ್ಮ, ಖಜಾಂಚಿ ಮಂಜುನಾಥ್, ರೇಷ್ಮ, ನೇತ್ರ, ವರಲಕ್ಷ್ಮಿ, ಹೀನಾ ಕೌಸರ್ ಇನ್ನು ಅನೇಕರು ಧರಣಿಯಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *