ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜನವರಿ.26 : ಯುವಸಮುದಾಯ ನಮ್ಮ ಸಂವಿಧಾನದ ಮೌಲ್ಯಗಳನ್ನು ಹಿಡಿದಿಟ್ಟುಕೊಳ್ಳಬೇಕು ಮತ್ತು ನಮ್ಮ ದೇಶದ ಪ್ರಗತಿಗೆ ವಿಶಿಷ್ಟ ಕೊಡುಗೆ ನೀಡಬೇಕು. ಯುವಕರು ನಮ್ಮ ದೇಶದ ಶ್ರೀಮಂತ ಪರಂಪರೆಯನ್ನು ಮರೆಯಬಾರದು ಮತ್ತು ಭಾರತ ರಾಷ್ಟ್ರದ ಭಾಗವಾಗಿರುವುದಕ್ಕೆ ಹೆಮ್ಮೆ ಪಡಬೇಕೆಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ನಗರದ ಹೊರಹೊಲಯದಲ್ಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದ ಆವರಣದಲ್ಲಿರುವ ಎಸ್.ಜೆ.ಎಸ್ ಸಮೂಹ ಸಂಸ್ಥೆಗಳಿದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಶ್ರೀಗಳು, ನಮ್ಮ ದೇಶದ ಸರ್ವಾಂಗೀಣ ಪ್ರಗತಿಗಾಗಿ ಕೆಲಸ ಮಾಡುವಾಗ, ನಮ್ಮ ರಾಷ್ಟ್ರಕ್ಕಾಗಿ ತ್ಯಾಗ ಮಾಡಿದ ಅನೇಕ ನಾಯಕರನ್ನು ನೆನಪಿಸಿಕೊಂಡು ಮುಂದಿನ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಬೇಕು. ನಮ್ಮ ರಾಷ್ಟ್ರವನ್ನು ರಕ್ಷಿಸಲು ಮತ್ತು ಹೆಮ್ಮೆಪಡುವಂತೆ ಮಾಡಲು ಸಂವಿಧಾನ ಆಶಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞೆ ಮಾಡಬೇಕು.
ಇಂದು ಪ್ರತಿಯೊಬ್ಬ ಯುವಕರು ತಮ್ಮ ಹಕ್ಕುಗಳು ಏನೆಂದು ತಿಳಿಯಲು ಬಯಸುತ್ತಾರೆ, ಸಂವಿಧಾನ ಅಧ್ಯಯನ ಮಾಡಿದರೆ, ಕರ್ತವ್ಯಗಳನ್ನು ನಿರ್ವಹಿಸಲು ಕಲಿತು ಸ್ವಯಂಚಾಲಿತವಾಗಿ ತನ್ನ ಹಕ್ಕುಗಳನ್ನು ಚಲಾಯಿಸುತ್ತಾರೆ.
ದೇಶಕ್ಕೆ ಸಂವಿಧಾನ ಸಮರ್ಪಣೆ ಹಾಗೂ ಗಣರಾಜ್ಯೋತ್ಸವ ದಿನವಾದ ಜ.26 ದೇಶದ ಜನರಿಗೆ ನಿಜವಾದ ಸಮಾನತೆ ಸಿಕ್ಕ ದಿನವಾಗಿದ್ದು, ಸಂವಿಧಾನದ ಮೂಲಕ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳ ನೀಡುವ ಮೂಲಕ ಭದ್ರ ಬುನಾದಿ ಹಾಕಿದ್ದಾರೆ.
ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನು ಹೊಂದಿದೆ. ಆ ಮೂಲಕ ನಾಗರೀಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ಪ್ರತಿಯೊಬ್ಬರು ಶ್ರಮಿಸಬೇಕು.
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ತಂಡದ ಸದಸ್ಯರ ದೂರದೃಷ್ಟಿಯ ಪರಿಣಾಮ ನಮ್ಮ ಅದ್ಭುತ ಸಂವಿಧಾನದಡಿಯಲ್ಲಿ ಸಮಬಾಳು ಸಮಪಾಲಿನ ದಿನಗಳನ್ನು ಕಾದು ನೋಡುವ ಆಶಭಾವನೆ ಇದೆ. ಸಂವಿಧಾನ ಶಿಲ್ಪಿ ಡಾ ಬಾಬಾ ಸಹೇಬ್ ಅಂಬೇಡ್ಕರ್ ಅವರ ಪ್ರಗತಿಯ ದಾರಿಯಲ್ಲಿ ನಡೆಯುವುದಕ್ಕೆ ದಾರಿದೀಪವಾಗಿದ್ದಾರೆ.
ಯುಗಯುಗಾಂತರಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ, ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿದೆ. ಇಡೀ ಜಗತ್ತಿಗೆ ವಿವಿಧತೆಯಲ್ಲಿ ಏಕತೆ ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು ಮತ್ತು ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯಮತ್ಯಕ್ಕಾಗಿ ನಾವು ಶ್ರಮಿಸಬೇಕು ಹೇಳಿದರು.
ಸಮಾರಂಭದಲ್ಲಿ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಶ್ರೀಧರ, ಶಾರದ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಹನುಮಂತಪ್ಪ, ಸಿದ್ಧರಾಮೇಶ್ವರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಜಯಮ್ಮ ಎಸ್.ಜೆ.ಎಸ್ ಆಂಗ್ಲ ಮಾದ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್