Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಿಚ್ಚನ ಸಿನಿಮಾದಲ್ಲಿ ವಿನಯ್ ಗೌಡ : ಫ್ಯಾನ್ಸ್ ದಿಲ್ ಖುಷ್

---Advertisement---

 

ಈಗಷ್ಟೇ ಬಿಗ್ ಬಾಸ್ ಸೀಸನ್ 10 ಮುಕ್ತಾಯಗೊಂಡಿದೆ. ಕಿಚ್ಚ ಸುದೀಪ್ ತಮ್ಮ ಸಿನಿಮಾದತ್ತ ಗಮನ ಹರಿಸಿದ್ದಾರೆ. ಮ್ಯಾಕ್ಸ್ ಸಿನಿಮಾದ ವಿಚಾರವಾಗಿ #Askkiccha ಅಡಿಯಲ್ಲಿ ಸುದೀಪ್ ಅಭಿಮಾನಿಗಳ ಜೊತೆಗೆ ಸಂಪರ್ಕ ಸಾಧಿಸಿದ್ದಾರೆ. ಅಭಿಮಾನುಗಳಿಗೂ ಸಿನಿಮಾ ಬಗ್ಗೆ, ಕಿಚ್ಚನ ಬಗ್ಗರ ಸಾಕಷ್ಟು ವಿಚಾರಗಳನ್ನು ಕೇಳಿ ತಿಳಿದುಕೊಳ್ಳುವುದಿರುತ್ತದೆ. ಹೀಗಾಗಿ ಕಿಚ್ಚ ಕೊಟ್ಟ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಂಡಿದ್ದಾರೆ.

ಕಿಚ್ಚನಿಗೆ ಪ್ರಶ್ನೆಗಳನ್ನು ಕೇಳಿದ್ದು, ಅದರಲ್ಲಿ ದರ್ಶನ್ ಹಾಗೂ ಅವರ ನಡುವಿನ ಸಮಸ್ಯೆಯ ಬಗ್ಗೆಯೂ ಅಭಿಮಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಇದೀಗ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ ವಿಲನ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಎಲ್ಲರಿಗೂ ಭಯ ಹುಟ್ಟಿಸುತ್ತಾ, ಒಂದು ರೀತಿಯಲ್ಲಿ ಖಡಕ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಅದಕ್ಕೆ ಬಿಗ್ ಬಾಸ್ ಮನೆಯ ಆನೆ ಅಂತಾನೇ ಅವರನ್ನು ಕರೆಯಲಾಗುತ್ತಿತ್ತು.

ಕಿಚ್ಚ ಸುದೀಪ್ ಬಳಿ ಅಭಿಮಾನಿಯೊಬ್ಬರು, ನಿಮ್ಮ ಮುಂದಿನ ಸಿನಿಮಾದಲ್ಲಿ ವಿನಯ್ ಗೌಡ ಅವರಿಗೂ ಅವಕಾಶ ಸಿಗಬಹುದೇ ಎಂಬ ರೀತಿಯಲ್ಲಿ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರ ನೀಡಿರುವ ಕಿಚ್ಚ ಸುದೀಪ್, ಖಂಡಿತಾ.. ಅವರದ್ದು ಅದ್ಭುತವಾದ ವ್ಯಕ್ತಿತ್ವ ಎಂದೇ ಉತ್ತರ ನೀಡಿದ್ದಾರೆ. ಇದನ್ನು ಕಂಡ ವಿನಯ್ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿ ಪಟ್ಟಿದ್ದಾರೆ. ಸುದೀಪ್ ಹಾಕಿರುವ ಪ್ರತಿಕ್ರಿಯೆಯ ಕಮೆಂಟ್ ಇರುವ ಸ್ಕ್ರೀನ್ ಶಾಟ್ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಬ್ಬ ಮಾಡುತ್ತಾ ಇದ್ದಾರೆ. ಮುಂದಿನ ಸಿನಿಮಾಗಳಲ್ಲು ವಿನಯ್ ಅವರನ್ನು ಸುದೀಪ್ ಜೊತೆಗೆ ವಿಲನ್ ಆಗಿ ನೋಡುವ ಅಭಿಮಾನಿಗಳ ಆಸೆಗೆ ಕಿಚ್ಚ ಕೂಡ ಪಾಸಿಟಿವ್ ಉತ್ತರ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment