ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ.02 : ತಾಲೂಕಿನ ಹಿರೇಹಳ್ಳಿ ಬಳಿ ಟ್ರ್ಯಾಕ್ಟರ್ ಗೆ ಕೆಎಸ್ಆರ್ಟಿಸಿ ರಾಜಹಂಸ ಬಸ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ.
ಇನ್ನು ರಾಜಹಂಸ ಬಸ್ಸಿನಲ್ಲಿದ್ದ ಸುಮಾರು 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ . ಗಾಯಗೊಂಡವರನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ, ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ನಜ್ಜುಗುಜ್ಜಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಳುಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















