ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.05 : ಅಲಕ್ಷಿತ ಶೋಷಿತ ಸಮುದಾಯಗಳ ಪರವಾಗಿ ಕಳೆದ ದಶಕದಿಂದಲೂ ಕಾರ್ಯನಿರ್ವಹಿಸುತ್ತಾ ಬರುತ್ತಿರುವ ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾವೇದಿಕೆ (ರಿ)ಯಿಂದ ಪ್ರತಿವರ್ಷದಂತೆ ಈ ವರ್ಷವೂ 2024-25ನೇ ಸಾಲಿಗೆ ನೀಡಲಾಗುತ್ತಿರುವ ‘ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿ’ ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಿಂದುಳಿದ ಅಲಕ್ಷಿತ ತಳ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ಜಾತಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ, ಆರ್ಥಿಕ ಚೈತನ್ಯಕ್ಕೆ, ಶೈಕ್ಷಣಿಕ ಪ್ರಗತಿಗೆ ಕಂಕಣಬದ್ಧರಾಗಿರುವಂತಹ, ತಳಸಮುದಾಯಗಳ ಪರವಾಗಿ ಧ್ವನಿ ಎತ್ತುವಂತಹ ಮಹಾನ್ ವ್ಯಕ್ತಿಗಳಿಗೆ ಅಥವ ಸಂಸ್ಥೆಗಳಿಗೆ ‘ ಭಾರತ ರತ್ನ ಕರ್ಪೂರಿ ಠಾಕೂರ್’ ಪ್ರಶಸ್ತಿಯನ್ನು ಸಮರ್ಪಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳು ಅರ್ಜಿಯನ್ನು ಸಲ್ಲಿಸಬಹುದು. ‘ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿ’ ಯು 25,000 ರೂ.ಗಳ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಆಸಕ್ತಿ ಹೊಂದಿರುವ ವ್ಯಕ್ತಿಗಳು, ಸಂಘ ಸಂಸ್ಥೆಗಳು ತಾವು ಮಾಡಿರುವ ಸೇವೆಗಳ ಕುರಿತು ಅಗತ್ಯ ಛಾಯಚಿತ್ರಗಳೊಳಗೊಂಡಂತೆ ವಿವರವಾದ ವರದಿ, ಸ್ವ ವಿವರಗಳೊಂದಿಗೆ ಅಗತ್ಯ ದಾಖಲೆಗಳೊಂದಿಗೆ ದಿ.15-02-2024ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ; ಟಿ.ತಿಪ್ಪೇಸ್ವಾಮಿ ಸಂಪಿಗೆ, ಅಧ್ಯಕ್ಷರು, ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಮಹಾವೇದಿಕೆ (ರಿ), ಕನ್ನಡ ಸಂಪಿಗೆ ಭವನ, ಪ್ರಸಾದ್ ಆಸ್ಪತ್ರೆ ರಸ್ತೆ, ವೇಮನ ನಗರ, ಚಿತ್ರದುರ್ಗ-5775501. ಮೊ; 9731338670