ಹಾಸನದ ಅಭ್ಯರ್ಥಿ ಯಾರಾಗಲಿದ್ದಾರೆ..? ಪ್ರಜ್ವಲ್ ರೇವಣ್ಣ ಈ ಬಗ್ಗೆ ಹೇಳಿದ್ದೇನು..?

suddionenews
1 Min Read

ಹಾಸನ: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಿಸಿ, ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕನಸಾಗಿದೆ. ಅದಕ್ಕಾಗಿಯೇ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಕುಮಾರಸ್ವಾಮಿ ಅವರು ಹಗಲು ರಾತ್ರಿ ಕಷ್ಟ ಪಟ್ಟು ಕಾರ್ಯಕರ್ತರು, ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

ಮೈತ್ರಿ ಮಾಡಿಕೊಂಡ ಪರಿಣಾಮ ಕಾಂಪಿಟೇಷನ್ ಇದ್ದ ಜಾಗದಲ್ಲೇ ಸಮಾಧಾನವಾಗಬೇಕಾದ ಪರಿಸ್ಥಿತಿ, ಕ್ಷೇತ್ರ ಬಿಟ್ಟುಕೊಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಸಂಸದ ಪ್ರಜ್ವಲ್ ರೇವಣ್ಣ ಈ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ. ಅಸಲಿಗೆ ಬಿಜೆಪಿಯ ಧುರೀಣರು ನನ್ನೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಒಂದಷ್ಟು ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಕ್ಷೇತ್ರದ ವಿಚಾರಕ್ಕೆ ಯಾವ್ಯಾವ ಅಂಶಗಳನ್ನು ಕೈಗೆತ್ತಿಕೊಳ್ಳಬೇಕೆಂದು ಚರ್ಚೆ ಮಾಡುತ್ತಿದ್ದಾರೆ.

ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಕೇಂದ್ರದಲ್ಲಿ ಎರಡು ಪಕ್ಷದ ನಾಯಕರನ್ನು ಮಾತನಾಡಿಸುತ್ತಿದ್ದಾರೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕುಮಾರಸ್ವಾಮಿ ಅವರು, ತಾಲೂಕು ಮಟ್ಟದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಂಸತ್ತಿನ ಅಧಿವೇಶನದ ಬಳಿಕ ಎಲ್ಲವೂ ತೀರ್ಮಾನವಾಗಲಿದೆ. ಕ್ಷೇತ್ರಗಳ ವಿಂಗಡನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅಷ್ಟೇ ಅಲ್ಲ ಎಲ್ಲಾ ಜೆಡಿಎಸ್ ನಾಯಕರ ಆಸೆ, ಒಂದೇ ಗುರಿ ಇರುವುದು ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿಯಾಗಬೇಕು ಎಂಬುದು ಎಂಬ ಮಾತನ್ನು ಹೇಳಿದ್ದಾರೆ.

ಮಂಡ್ಯ ಈ ಬಾರಿಯ ಲೋಕಸಭೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಕ್ಷೇತ್ರವನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಿದೆ. ಅದರಲ್ಲಿ ಮಂಡ್ಯ, ಹಾಸನ, ಕೋಲಾರ. ಇನ್ನುಳಿದಂತೆ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ.

Share This Article
Leave a Comment

Leave a Reply

Your email address will not be published. Required fields are marked *