Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೋಕ್ಸೋ ಪ್ರಕರಣ : ಅಪ್ರಾಪ್ತ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸ, ಆರೋಪಿಗೆ 10 ವರ್ಷ ಜೈಲು ಶಿಕ್ಷೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆ.07 : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಚಿತ್ರದುರ್ಗ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ತ್ವರಿತ ವಿಶೇಷ ನ್ಯಾಯಾ ಲಯವು 10 ವರ್ಷ ಕಠಿಣ ಸಜೆ ಮತ್ತು ರೂ.50,000/- ದಂಡ ವಿದಿಸಿ ಆದೇಶಿಸಿದೆ.

ಆರೋಪಿ ಮನು @ ಮಲ್ಲಿಕಾರ್ಜುನ ಕಾರ್ತಿಕೇನಹಟ್ಟಿ ಗ್ರಾಮ, ಚಳ್ಳಕೆರೆ ತಾಲ್ಲೂಕು ವಾಸಿ ಶಿಕ್ಷೆಗೆ ಗುರಿಯಾದ ಆರೋಪಿ.

ಚಳ್ಳಕೆರೆ ನಗರದ ಅಜ್ಜಯ್ಯನಗುಡಿ ರಸ್ತೆಯಲ್ಲಿರುವ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಹೆಚ್.ಎಂ.ಎಸ್.ಲೇಔಟ್ ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಆಗಾಗ ಅತ್ಯಾಚಾರ ಮಾಡಿದ್ದು, ಇದರಿಂದ ನೊಂದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದು ಈ ಬಗ್ಗೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪೋಲಿಸ್ ಇನ್ಸ್‌ಪೆಕ್ಟರ್‌ ಶ್ರೀ.ಆರ್.ಎಫ್.ದೇಸಾಯಿ ಇವರು ತನಿಖೆಯನ್ನು ಪೂರೈಸಿ ಆರೋಪಿ ವಿರುದ್ಧ ಕಲಂ.ನಂ.376(2)(ಎನ್) ಐ.ಪಿ.ಸಿ. ಮತ್ತು ಕಲಂ.4, 5, 6 ಪೋಕೋ ಕಾಯ್ದೆಯಡಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಂತರ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ.ಕೋಮಲ ಇವರು ಆರೋಪಿ ಮನು- @ ಮಲ್ಲಿಕಾರ್ಜುನನ್ನು ದೋಷಿ ಎಂದು ಪರಿಗಣಿಸಿ 10 ವರ್ಷ ಕಠಿಣ ಸಜೆ ಮತ್ತು ರೂ.50,000/- ದಂಡ ವಿದಿಸಿ ಮತ್ತು ದಂಡ ಪಾವತಿಸಲು ತಪ್ಪಿದರೆ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿರುತ್ತಾರೆ.

ಪ್ರಕರಣದ ನೊಂದ ಬಾಲಕಿಗೆ ರೂ.4,00,000/- ಪರಿಹಾರ ಮತ್ತು ದಂಡದ ಮೊತ್ತ ರೂ.50,000/- ನೀಡಲು ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ.
ಪ್ರಾಸಿಕ್ಯೂಷನ್‌ ಪರವಾಗಿ ಚಿತ್ರದುರ್ಗ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕರಾಗಿ
ಹೆಚ್.ಆರ್.ಜಗದೀಶ್ ವಾದಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment