Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 09 ರಂದು ದಿವ್ಯಾಪ್ರಭು ಅವರಿಗೆ ಬೀಳ್ಕೊಡುಗೆ ಸಮಾರಂಭ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.07 :  ಧಾರವಾಡಕ್ಕೆ ವರ್ಗವಾಗಿರುವ ಜಿಲ್ಲಾಧಿಕಾರಿ ಜಿ.ಆರ್.ಜಿ.ದಿವ್ಯಪ್ರಭು ಅವರಿಗೆ ಬೀಳ್ಕೊಡುಗೆ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ಜಿ.ವೆಂಕಟೇಶ ಅವರಿಗೆ ಸ್ವಾಗತ ಸಮಾರಂಭವನ್ನು ಚಿತ್ರದುರ್ಗ ನಾಗರೀಕ ವೇದಿಕೆ ವತಿಯಿಂದ ನಗರದಲ್ಲಿ ಫೆಬ್ರವರಿ 09ರಂದು ಹಮ್ಮಿಕೊಳ್ಳಲಾಗಿದೆ.

ಅಂದು ಸಂಜೆ 5 ಗಂಟೆಗೆ ತರಾಸು ರಂಗಮಂದಿರದಲ್ಲಿ ಸಮಾರಂಭವನ್ನು ಆಯೋಜಿಸಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ‌ ಮೀನಾ, ಜಿಲ್ಲಾ ಪಂಚಾಯತ್ ಸಿಇಒ ಸೋಮಶೇಖರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಯುಕ್ತೆ ವಿ.ವಿ.ಜೋತ್ಸ್ನಾ, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀಕಾಂತರೆಡ್ಡಿ ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಡಾ.ಎಚ್.ಎ.ಷಣ್ಮುಖಪ್ಪ, ಹಿರಿಯ ವಕೀಲ ಫಾತ್ಯರಾಜನ್, ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಉಪಸ್ಥಿತಿ ಇರಲಿದ್ದು
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರಾದ ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು, ಡಾ. ಸೌಮ್ಯಾ ಮಂಜುನಾಥ್ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment