Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ಶಬ್ಬಾಷ್’ ಚಿತ್ರತಂಡ

---Advertisement---

 

ಬೆಂಗಳೂರು : ರುದ್ರಶಿವ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಶಬ್ಬಾಷ್ ಸಿನಿಮಾ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿರುವ ಚಿತ್ರತಂಡ, ಒಂದೊಂದೇ ಕುತೂಹಲಕಾರಿ ವಿಚಾರಗಳನ್ನು ತೆರೆದಿಡುತ್ತಿದೆ. ಈ ಸಿನಿಮಾ ಸಂಕ್ರಾಂತಿಯಂದು ಮುಹೂರ್ತ ಕಂಡಿತ್ತು. ಈಗ ಬಹಳ ಬೇಗನೇ ಚಿತ್ರೀಕರಣವನ್ನು ಮುಗಿಸಿದೆ.

ರುದ್ರಶಿವ ಯೋಜನೆಯಂತೆ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಏಳು ದಿನಗಳ ಚಿತ್ರೀಕರಣ ಮುಗಿಸಿಕೊಂಡು, ಚನ್ನಗಿರಿಯ ಶಾಂತಿಸಾಗರದ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಅಲ್ಲಿನ ಪೌರಾಣಿಕ, ಐತಿಹಾಸಿಕ ಸ್ಥಳಗಳಲ್ಲಿ ಸಾಂಗವಾಗಿ ಚಿತ್ರೀಕರಣ ನೆರವೇರಿದೆ. ಅಂದಹಾಗೆ, ಚನ್ನಗಿರಿಯ ಶಾಂತಿಸಾಗರ ಸೂಳೆಕೆರೆ ಅಂತಲೂ ಕರೆಸಿಕೊಳ್ಳುತ್ತದೆ. ಏಷ್ಯಾ ಖಂಡದಲ್ಲಿಯೇ ಎರಡನೇ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯೂ ಶಾಂತಿಸಾಗರಕ್ಕಿದೆ. ಈ ಕೆರೆಗೂ ಹನ್ನೆರಡನೇ ಶತಮಾನಕ್ಕೂ ಎಂದಿಗೂ ಸಡಿಲವಾಗದಂಥಾ ಕೊಂಡಿಗಳಿದ್ದಾವೆ. ಸ್ವರ್ಗಾವತಿ ಪಟ್ಟಣದ ದೊರೆ ವಿಕ್ರಮರಾಜನ ಸುಪುತ್ರಿ ಶಾಂತವ್ವ ತನಗಾದ ಅವಮಾನಕ್ಕೆ ಪ್ರತಿಭಟನೆಯ ಸ್ವರೂಪದಲ್ಲಿ ಈ ಬೃಹತ್ ಕೆರೆಯನ್ನು ಸೃಷ್ಟಿಸಿದಳೆಂಬ ಪ್ರತೀತಿ ಇದೆ.

ಇಲ್ಲಿಯೇ ಸರ್ ಎಂ ವಿಶ್ವೇಶ್ವರಯ್ಯ ಕಟ್ಟಿಸಿರುವ ಸೇತುವೆಯೊಂದು ಪ್ರಧಾನ ಆಕರ್ಷಣೆ. ಎರಡು ಬೆಟ್ಟಗಳನ್ನು ಸೇರಿಸಿ ಈ ಸೇತುವೆಯನ್ನು ಕಟ್ಟಿಸಲಾಗಿದೆ. ಈವತ್ತಿಗೂ ಅಚ್ಚರಿಯಾಗಿ ಕಾಣಿಸುವ ಈ ಸೇತುವೆಯ ಮೇಲೆ ಶಭ್ಬಾಷ್ ಚಿತ್ರೀಕರಣ ನಡೆಸಲಾಗಿದೆ. ಅಷ್ಟಕ್ಕೂ ಅತ್ಯಂತ ಎತ್ತರದ ಪ್ರದೇಶದಲ್ಲಿರುವ ಆ ಸೇತುವೆ ಮೇಲೆ ಚಿತ್ರೀಕರಣ ನಡೆಸುವುದೊಂದು ಸಾಹಸ. ಕೆಲವೇ ಕೆಲ ಕಲಾವಿದರು, ತಂತ್ರಜ್ಞರು ಮಾತ್ರವೇ ಅಲ್ಲಿಗೆ ತಲುಪಲು ಸಾಧ್ಯವಾಗಿತ್ತು. ಇದು ನಿರ್ದೇಶಕ ರುದ್ರಶಿವ ಸೇರಿದಂತೆ ಒಂದಿಡೀ ಚಿತ್ರತಂಡದ ಪಾಲಿಗೆ ಅಮೋಘ ಅನುಭವವನ್ನು ತುಂಬಿದೆ. ಛಾಯಾಗ್ರಾಹಕರು, ಕಲಾವಿದರು, ತಾಂತ್ರಿಕ ವರ್ಗ ದಣಿವು ಮರೆತು ಈ ಚಿತ್ರೀಕರಣದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದಾರೆ.

 


ಇದಲ್ಲದೇ ಈ ಭಾಗದಲ್ಲಿರುವ ಪ್ರಸಿದ್ಧ ದೇವಾಲಯ, ಹಳ್ಳಿಗಳಲ್ಲಿ ನಾಯಕ ನಾಯಕಿಯ ಪೋಷನ್ನಿನ ಚಿತ್ರೀಕರಣ ನಡೆಸಲಾಗಿದೆ. ಇಂಥಾದ್ದೊಂದು ಸುಂದರ ವಾತಾವರಣದಲ್ಲಿ ಅಚ್ಚುಕಟ್ಟಾಗಿ ಮೊದಲನೇ ಹಂತದ ಚಿತ್ರೀಕರಣವನ್ನು ಮುಗಿಸಿಕೊಳ್ಳಲಾಗಿದೆ. ಶಭ್ಬಾಷ್ ಆಕ್ಷನ್ ಡ್ರಾಮಾ ಜಾನರಿನ ಸಿನಿಮಾ. ಓಂ ಸಾಯಿ ಪ್ರಕಾಶ್ ಸೇರಿದಂತೆ ಘಟಾನುಘಟಿ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ ನಿರ್ದೇಶನದ ಮೊದಲ ಚಿತ್ರವಿದು. ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ಏಸ್ 22 (ACE 22) ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

 

ಈಗಾಗಲೇ `ಕ’ ಮತ್ತು ಮಳೆಬಿಲ್ಲು ಸಿನಿಮಾಗಳಲ್ಲಿ ನಟಿಸಿರುವ ಶರತ್ ನಾಯಕನಾಗಿ ನಟಿಸಿದ್ದರೆ, ನಿಸರ್ಗ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇದೀಗ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು, ಅದಾಗಲೇ ಎರಡನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ. ಆ ಬಗೆಗಿನ ಒಂದಷ್ಟು ವಿವರಗಳು ಇಷ್ಟರಲ್ಲಿಯೇ ಜಾಹೀರಾಗಲಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment