Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಿಂದ ಸುಮಲತಾ ಸ್ಪರ್ಧೆ ಗ್ಯಾರಂಟಿನಾ..? : ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಬಳಿಕ ಸುಮಲತಾ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸುಮಲತಾಗೆ ಮಂಡ್ಯ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದೇ ಹೇಳಲಾಗುತ್ತಿದೆ. ಈ ಹಿನ್ನೆಲೆ ಸುಮಲತಾ ನೇರ ದೆಹಲಿಯಲ್ಲೆ ಟಿಕೆಟ್ ಲಾಬಿ ಮಾಡುತ್ತಿದ್ದಾರೆ. ಇದೀಗ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ. ಟ್ವಿಟ್ಟರ್ ಮೂಲಕ ಭೇಟಿ ಬಗ್ಗೆ ಹಂಚಿಕೊಂಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @PMOIndia ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು.
@narendramodi ಶ್ರೀ ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ.
ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ.

ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ. 17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ.

ಈ ಬಾರಿಯ ತಮ್ಮ ಭೇಟಿ ಸಂಧರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ.
ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

error: Content is protected !!