Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಡ್ಯದ ಸಮೀಕ್ಷೆಯಲ್ಲಿ ಜೆಡಿಎಸ್ ಗೆ ಒಲವು : ಮತ್ತೆ ಅದೃಷ್ಟ ಪರೀಕ್ಷೆ ಮಾಡಿಕೊಳ್ತಾರಾ ನಿಖಿಲ್..?

---Advertisement---

ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯಕ್ಕೋಸ್ಕರ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಸಾಕಷ್ಟು ಪರಿಶ್ರಮ ಹಾಕಿದ್ದಾರೆ. ಆದರೆ ನಿಖಿಲ್ ಕುಮಾರಸ್ವಾಮಿ ಅವರು ಸೋಲನ್ನೇ ಕಂಡಿದ್ದಾರೆ. ಹೀಗಾಗಿ ಸ್ವಲ್ಪ ವರ್ಷಗಳ ಕಾಲ ಸಿನಿಮಾದತ್ತ ಗಮನಹರಿಸುವುದಾಗಿ ಅವರ ತಂದೆ ಕುಮಾರಸ್ವಾಮಿ ಅವರು ಹೇಳಿದ್ದರು. ಈ ಬಾರಿಯ ಲೋಕಸಭೆ ನಿಲ್ಲುತ್ತಾರಾ ಎಂಬ ಪ್ರಶ್ನೆಗೂ, ಇಲ್ಲ ಸಿನಿಮಾ ಮಾತ್ರ. ಆದರೆ ಬೆಂಬಲ ನೀಡುತ್ತೀನಿ. ಪಕ್ಷದ ಕೆಲಸದಲ್ಲಿ ತೊಡಗಿಕೊಳ್ತೀನಿ ಅಂತ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಹೇಳಿದ್ದರು.

ಈ ಬಾರಿಯ ಲೋಕಸಭಾ ಚುನಾವಣೆಗೆ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಮಂಡ್ಯವನ್ನು ಜೆಡಿಎಸ್ ಪಡೆಯುವ ಎಲ್ಲಾ ಸಾಧ್ಯತೆ ಇದೆ. ಈಗಾಗಲೇ ಮಂಡ್ಯದಲ್ಲಿ ಯಾರ ಪರವಾದ ಅಲೆ ಇದೆ ಎಂಬುದನ್ನು ಸರ್ವೆ ಮಾಡಿಸಲಾಗಿದೆ. ಆ ಸರ್ವೆಯಲ್ಲಿ ಜೆಡಿಎಸ್ ಪರವೇ ಬಂದಿದೆ. ಹೀಗಾಗಿ ಮತ್ತೊಮ್ಮೆ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕೆ ಇಳಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.

ಇನ್ನು ಹಾಸನ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರನ್ನೇ ಘೋಷಣೆ ಮಾಡಲಾಗಿದೆ. ಅಲ್ಲಿಯೂ ವಿರೋಧದ ಅಲೆ ಎದ್ದಾಗ ಅಲ್ಲಿಯೂ ಸರ್ವೇ ನಡೆಸಲಾಗಿತ್ತು. ಅಲ್ಲಿಯೂ ಪ್ರಜ್ವಲ್ ರೇವಣ್ಣ ಪರವಾಗಿ ಜನಮತ ಬಂದಿದೆ. ಈಗ ಮಂಡ್ಯದಿಂದ ನಿಖಿಲ್ ಅವರನ್ನೇ ಕಣಕ್ಕೆ ಇಳಿಸಿ ಎಂದು ಕಾರ್ಯಕರ್ತರು ಕೂಡ ಒತ್ತಾಯ ಮಾಡುತ್ತಿದ್ದಾರೆ. ಜನರ ಒಲವು ಜೆಡಿಎಸ್ ಕಡೆ ಇರುವ ಕಾರಣ ಯೋಚಿಸಬಹುದು. ಇನ್ನು ಹಳೇ ಮೈಸೂರು ಭಾಗವನ್ನು ಈ ಬಾರಿ ಜೆಡಿಎಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದಕ್ಕೂ ಪ್ರಯತ್ನ ಪಡುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment