ಚಿತ್ರದುರ್ಗದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಮತ್ತು ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.10 : ಹಿಂದುಳಿದ ಜಿಲ್ಲೆ ಚಿತ್ರದುರ್ಗದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಬೇಕಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಚಿತ್ರದುರ್ಗ ಗೆಳೆಯರ ಬಳಗ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ವೀರವನಿತೆ ಒನಕೆ ಓಬವ್ವ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಕ್ರೀಡಾಪುಟಗಳಿಗೆ ಉತ್ತೇಜನ ಕೊಡಬೇಕಾಗಿರುವುದರಿಂದ ಒಳಾಂಗಣ ಕ್ರೀಡಾಂಗಣಕ್ಕೆ ಅಗತ್ಯವಿರುವ ಮೂಲ ಸೌಲಭ್ಯ ಕಲ್ಪಿಸುತ್ತೇನೆ. ನಮ್ಮ ಜಿಲ್ಲೆಯ ಬ್ಯಾಡ್ಮಿಂಟನ್ ಆಟಗಾರರು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶಿಸಿ ಜಿಲ್ಲೆಗೆ ಕೀರ್ತಿ ತರುವಂತೆ ತಿಳಿಸಿದರು.

ಚಿತ್ರದುರ್ಗ ಗೆಳೆಯರ ಬಳಗ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕೆ.ಇ.ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ವೈ.ರವಿಕುಮಾರ್, ನಿಕಟ ಪೂರ್ವ ಅಧ್ಯಕ್ಷ ಮೋಹನ್‍ಕುಮಾರ್, ಖಜಾಂಚಿ ಓ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಸುಚೇತಾ ಎಂ.ನೆಲವಿಗಿ ಈ ಸಂದರ್ಭದಲ್ಲಿ ಹಾಜರಿದ್ದರು.

ಒಳಾಂಗಣ ಕ್ರೀಡಾಂಗಣಕ್ಕೆ ಮ್ಯಾಟ್, ಎಲ್.ಇ.ಡಿ. ಲೈಟ್, ಬಣ್ಣ ಬಳಿಸುವಂತೆ ಜಿಲ್ಲಾಧಿಕಾರಿಯವರಲ್ಲಿ ಚಿತ್ರದುರ್ಗ ಗೆಳೆಯರ ಬಳಗ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಮನವಿ ಮಾಡಲಾಯಿತು.


 

Share This Article
Leave a Comment

Leave a Reply

Your email address will not be published. Required fields are marked *